November 30, 2023

Bhavana Tv

Its Your Channel

ದೆಹಲಿ ಆಪ್ ತೆಕ್ಕೆಗೆ : ಬಿಜೆಪಿಗೆ ನಿರಾಸೆ – ಕಾಂಗ್ರೆಸ್ ಧೂಳಿಪಟ

ದೇಶದ ಗಮನ ಸೆಳೆದಿದ್ದ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಆಮ್ ಆದ್ಮಿ ಪಾರ್ಟಿ ಮೂರನೇ ಬಾರಿಗೆ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿ ಮತ್ತೆ ಅಧಿಕಾರಕ್ಕೆ ಬಂದಿದೆ.

ಅಧಿಕಾರದ ಕನಸು ಕಂಡಿದ್ದ ಬಿಜೆಪಿಗೆ ಭಾರೀ ಹಿನ್ನಡೆಯಾಗಿದ್ದರೆ, ಕಾಂಗ್ರೆಸ್ ಹೇಳಹೆಸರಿಲ್ಲದಂತೆ ಧೂಳಿಪಟವಾಗಿದೆ.
ಆಪ್ 58 ಸ್ಥಾನಗಳಲ್ಲಿ ಗೆದ್ದರೆ ಕೇವಲ 12 ಸ್ಥಾನಗಳಿಗೆ ಬಿಜೆಪಿ ತೃಪ್ತಿಪಟ್ಟುಕೊಂಡಿದೆ. ಇನ್ನು ಕಾಂಗ್ರೆಸ್ ಒಂದೇ ಒಂದು ಕ್ಷೇತ್ರದಲ್ಲಿ ಗೆಲುವು ದಾಖಲಿಸಲು ವಿಫಲವಾಗಿದೆ.

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರ ಖ್ಯಾತ ಘೋಷಣೆ ‘ಅಚ್ಛೇ ಬಿತೆ ಪಾಂಚ್ ಸಾಲ್’ ಜನಮನ ಸೆಳೆಯುವಲ್ಲಿ ಸಫಲವಾಗಿದೆ.

error: