March 29, 2024

Bhavana Tv

Its Your Channel

ಅನ್ನ ಭಾಗ್ಯ’ ಫಲಾನುಭವಿಗಳಿಗೆ ಸಿಹಿಸುದ್ದಿ : ನವೆಂಬರ್ ವರೆಗೂ ಸಿಗಲಿದೆ ‘ಉಚಿತ ಪಡಿತರ ಧಾನ್ಯ’

ನವದೆಹಲಿ : ರಾಷ್ಟ್ರವನ್ನುದ್ದೇಶಿಸಿ ಮಾತನಾಡಿ ಪ್ರಧಾನಿ ಮೋದಿ ಕರೊನಾ ವಿರುದ್ಧ ನಾವು ಹೋರಾಡುತ್ತಲೇ ಅನ್​ಲಾಕ್​ ಎರಡನೇ ಹಂತಕ್ಕೆ ಪ್ರವೇಶಿಸುತ್ತಿದ್ದೇವೆ. ಬೇರೆ ದೇಶಗಳಿಗೆ ಹೋಲಿಸಿದರೆ, ಭಾರತದ ಸ್ಥಿತಿ ಉತ್ತಮವಾಗಿದೆ. ಪಿಎಂ ಗರಿಬ್ ಆನ್ನ ಯೋಜನೆ ನವೆಂಬರ್ ಅಂತ್ಯದವರೆಗೆ ವಿಸ್ತರಿಸಲು ನಾವು ನಿರ್ಧರಿಸಿದ್ದೇವೆ 80 ಕೋಟಿ ಜನರಿಗೆ ಪ್ರಯೋಜನಗಳನ್ನು ನೀಡುವ ಈ ಯೋಜನೆ ನವೆಂಬರ್ ವರೆಗೆ ಮುಂದುವರಿಯುತ್ತದೆ ಅಂತ ಹೇಳಿದರು.

ಲಾಕ್​ಡೌನ್​ ಬೆನ್ನಲ್ಲೇ ಗರೀಬ್​ ಕಲ್ಯಾಣ ಯೋಜನೆ ಜಾರಿಗೊಳಿಸಲಾಯಿತು. 20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್​ ಘೋಷಿಸಲಾಗಿದೆ. ರೈತರ ಖಾತೆಗಳಿಗೆ 18 ಸಾವಿರ ಕೋಟಿ ರೂ. ಜಮೆಯಾಗಿದೆ. 9 ಸಾವಿರಕ್ಕೂ ಹೆಚ್ಚು ರೈತರ ಖಾತೆಗಳಿಗೆ ಕಿಸಾನ್​ ಸಮ್ಮಾನ್​ ನಿಧಿ ಹಣವನ್ನು ಜಮೆ ಮಾಡಲಾಗಿದೆ. ಬಡವರ ಖಾತೆಗಳಿಗೆ 31 ಸಾವಿರ ಕೋಟಿ ರೂ. ಜಮೆಯಾಗಿದೆ ಎಂದು ಹೇಳಿದರು.

ಇದೇ ವೇಳೆ ಲಾಕ್​ಡೌನ್​ ಕುರಿತು ಮಾತನಾಡಿದ ಪ್ರಧಾನಿ ಮೋದಿ, ದೇಶದಲ್ಲಿ ಮತ್ತೆ ಲಾಕ್​ಡೌನ್​ ಮುಂದುವರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಆರ್ಥಿಕ ಚಟುವಟಿಕೆಗಳನ್ನು ಮುಂದುವರಿಸುವುದಾಗಿ ತಿಳಿಸಿದರು. ನಾವೆಲ್ಲರೂ ಲಾಕ್​ಡೌನ್​ ನಿಯಮ ಪಾಲಿಸಿದ್ದೇವೆ. ಸಾಮಾಜಿಕ ಅಂತರ ಹಾಗೂ ಮಾಸ್ಕ್​ ಬಳಸಿದ್ದೇವೆ. ಆದರೂ ಮುಂದಿನ ದಿನಗಳಲ್ಲಿ ಇನ್ನಷ್ಟು ಜಾಗ್ರತೆ ತುಂಬಾ ಅವಶ್ಯಕವಾಗಿದೆ. ಕಂಟೈನ್ಮೆಂಟ್​ ಝೋನ್​ಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸಿ ಎಂದು ಕರೆ ನೀಡಿದರು.

error: