
ನವದೆಹಲಿ : ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕು ಹಿನ್ನೆಲೆ ಸಿಬಿಎಸ್ ಇ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ.
ಇಂದು ತಜ್ಞರ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದರು. ಸಭೆಯ ಬಳಿಕ ಮಾತಾಡಿರುವ ಪ್ರಧಾನಿ ಮೋದಿ, ಸಿಬಿಎಸ್ ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದ್ದು, 12ನೇ ತರಗತಿಯ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.
ಕೇಂದ್ರ ಶಿಕ್ಷಣ ಸಚಿವ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಮೇ 4 ರಿಂದ 10 ಮತ್ತು 12ನೇ ತರಗತಿಯ ಪರೀಕ್ಷೆಗಳು ಆರಂಭವಾಗಲಿದ್ದವು. ಆದರೆ, ಇಂದು ಸಭೆಯಲ್ಲಿ ಚರ್ಚಿಸಿದ ಬಳಿಕ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಪಡಿಸುವ ನಿರ್ಣಯ ಕೈಗೊಳ್ಳಲಾಯಿತು. ಹಾಗೂ 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಜೂನ್ 1 ರ ನಂತರ ನೂತನ ವೇಳಾಪಟ್ಟಿ ಪ್ರಕಟಿಸುವುದಾಗಿ ತಿಳಿಸಿದೆ.
source:ಉದಯವಾಣಿ
More Stories
ಈಜಿಪ್ಟ್ ನಲ್ಲಿ ನಡೆಯಲಿರುವ ಹವಾಮಾನ ವೈಫರೀತ್ಯದ ವಿಶ್ವ ನಾಯಕರ ಸಮಾವೇಶಕ್ಕೆ ಕನ್ನಡಿಗ ಐಎಫ್ಎಸ್ ಅಧಿಕಾರಿ ಎ.ಟಿ. ದಾಮೋದರ ನಾಯ್ಕ
‘ಖೇಲ್ ರತ್ನ ಪ್ರಶಸ್ತಿ’ಯನ್ನು ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ’ ಎಂದು ಮರುನಾಮಕರಣ – ಪ್ರಧಾನಿ ನರೇಂದ್ರ ಮೋದಿ ಘೋಷಣೆ
NEET-PG ಪರೀಕ್ಷೆ ಕನಿಷ್ಠ ʼ4 ತಿಂಗಳು ಮುಂದೂಡಿಕೆʼ; ಕೇಂದ್ರ ಸರ್ಕಾರ ಘೋಷಣೆ