July 14, 2024

Bhavana Tv

Its Your Channel

ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದಿoದ 24ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

ಶಿವಮೊಗ್ಗಾ: ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘ ನರಸಿಂಹರಾಜಪುರ, ಇವರ ಸಂಯುಕ್ತ ಆಶ್ರಯದಲ್ಲಿ, 24ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಪವಿತ್ರ_ರಾಮಯ್ಯ

ಹಾಗೂ ರಾಜ್ಯಮಟ್ಟದ ವೈಜ್ಞಾನಿಕ ಸಂಶೋಧನಾ ಪರಿಷತ್ ಪ್ರಶಸ್ತಿ ಪುರಸ್ಕೃತರಾದ ಹೆಚ್. ಟಿ. ರಾಜೇಂದ್ರ ಇವರಿಗೆ ಸನ್ಮಾನಿಸಲಾಯಿತು ಮತ್ತು ಕೆಲವು ಚಟುವಟಿಕೆಗಳಲ್ಲಿ ವಿಜೇತರಿಗೆ ಬಹುಮಾನವನ್ನು ನೀಡಲಾಯಿತು, ಮತ್ತು ಸಭೆಯ ಉದ್ದೇಶಸಿ ಕೆಲವು ಹಿತನುಡಿಯನ್ನು ನುಡಿದು ಮಹಿಳೆಯರಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಶಾಶ್ವತಿ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ಚೈತ್ರ ರಮೇಶ್, ಹಾಗೂ ಕಾರ್ಯದರ್ಶಿಗಳಾದ ಶ್ರೀಮತಿ ಭವ್ಯ ಸಂತೋಷ್, ಮತ್ತು ಶ್ರೀಮತಿ ರಜಿನಿ ರಮೇಶ್, ಹಾಗೂ ಸಂಘದ ಪದಾಧಿಕಾರಿಗಳು, ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

error: