April 24, 2024

Bhavana Tv

Its Your Channel

ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ರದ್ದು , ಬಿಎಸ್ ವೈ ಘೋಷಣೆ.

ಬೆಂಗಳೂರು : ಮುಂದಿನ ವಾರದಿಂದ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಿರುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಸೋಮವಾರ ಅಂದರೆ ಜುಲೈ ೫ರಿಂದ ೧೪ದಿನಗಳ ಅನ್ ಲಾಕ್ ಜಾರಿಗೊಳಿಸಲಾಗಿದೆ. ರಾತ್ರಿ ೯ರಿಂದ ಬೆಳಗ್ಗೆ ೫ ಗಂಟೆವರೆಗೆ ನೈಟ್ ಕರ್ಫ್ಯೂ ಇರಲಿದೆ. ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಲಾಗಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಸಡಿಲಿಸಲಾಗಿದ್ದು, ಸೋಮವಾರದಿಂದ ಜನ ಜೀವನ ಸಹಜ ಸ್ಥಿತಿಗೆ ಮರಳಲಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಕಾವೇರಿ ನಿವಾಸದಲ್ಲಿ ಕೋವಿಡ್ ಉಸ್ತುವಾರಿಗಳು, ಸಚಿವರು, ತಜ್ಞರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅನ್ ಲಾಕ್ -೩.೦ ಪ್ರಕ್ರಿಯೆಯನ್ನು ಪ್ರಕಟಿಸಿದರು.
ಮಾಲ್, ದೊಡ್ಡ ಹೊಟೇಲ್ ತೆರೆಯಲು ಅವಕಾಶ ಕಲ್ಪಿಸಲಾಗಿದ್ದು. ವೀಕೆಂಡ್ ಕರ್ಫ್ಯೂ ರದ್ದುಪಡಿಸಿ ನೈಟ್ ಕರ್ಫ್ಯೂವನ್ನು ಮಾತ್ರ ಮುಂದುವರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಚಿತ್ರಮಂದಿರ ತೆರೆಯಲು ಅವಕಾಶ ನೀಡಿಲ್ಲ. ಕೊಡಗು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಎಲ್ಲಾ ಚಟುವಟಿಕೆಗಳಿಗೆ ರಾತ್ರಿ ೯ ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ರಾತ್ರಿ ಕರ್ಫ್ಯೂ ಮುಂದುವರಿಸಲಾಗಿದೆ. ಸಾರಿಗೆ ಬಸ್ ಪೂರ್ಣ ಪ್ರಮಾಣದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ಇನ್ನು ಮುಂದೆ ವೀಕೆಂಡ್ ಕರ್ಫ್ಯೂ ರದ್ದುಪಡಿಸಲಾಗಿದೆ ಎಂದರು.

ಕೊಡಗಿನಲ್ಲಿ ಎಲ್ಲಾ ಚಟುವಟಿಕೆ ತೆರೆಯಲು ಅವಕಾಶ ನೀಡಿಲ್ಲ. ಈ ಬಗ್ಗೆ ಅಲ್ಲಿನ ಜಿಲ್ಲಾಧಿಕಾರಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ಮಸೀದಿ, ಮಠ ಮಂದಿರ, ಚರ್ಚ್ ತೆರೆಯಲು ಅವಕಾಶ ಕಲ್ಪಿಸಲಾಗಿದೆ.

ಮುಖ್ಯಾಂಶಗಳು
ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. ೧೦೦ ರಷ್ಟು ಸಿಬ್ಬಂದಿಗಳೊAದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
ಮಾಲ್ ಗಳನ್ನು ತೆರೆಯಲು ಅವಕಾ

ಶ ನೀಡಲಾಗಿದೆ.
ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. ೧೦೦ ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.
ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ ೧೦೦ ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
ಅಂತ್ಯ ಸಂಸ್ಕಾರಕ್ಕೆ ೨೦ ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.
ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ ೯.೦೦ ರಿಂದ ಬೆಳಿಗ್ಗೆ ೫.೦೦ ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
ಪಬ್ ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್‌ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.
ಕೋವಿಡ್-೧೯ ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿ.

error: