October 5, 2024

Bhavana Tv

Its Your Channel

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರಿಬ್ಬರಲ್ಲಿ ಕೊರೋನಾ ದೃಢ

ಬೆಂಗಳೂರು, ಮಾ28- ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರಿಬ್ಬರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಒಬ್ಬ ಪ್ರಯಾಣಿಕರು ಮಾ.21ರಂದು ಪ್ರಯಾಣಿಸಿದ ಕರ್ನಾಟಕ ಸಾರಿಗೆ ಬಸ್ಸು ನಂ.KA19 F3329, ಸಂಜೆ 4.30 ಕ್ಕೆ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಮಂಗಳೂರಿಗೆ ಹೊರಟಿರುತ್ತದೆ.

ಮತ್ತೊಬ್ಬ ಪ್ರಯಾಣಿಕರು ಪ್ರಯಾಣಿಸಿದ ರಾಜಹಂಸ ಬಸ್ಸು ನಂ.KA57F3802 ಮಾ.18 ರಂದು ಬೆಳಗ್ಗೆ 10 ಕ್ಕೆ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ದಾವಣಗೆರೆಗೆ ಹೊರಟಿರುತ್ತದೆ.

ಈ ಎರಡು ಬಸ್ಸಿನಲ್ಲಿ‌ ಪ್ರಯಾಣಿಸಿದ ಪ್ರಯಾಣಿಕರು ಕೂಡಲೇ ಹತ್ತಿರದ ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಲು ಕೆಎಸ್‌ಆರ್ ಟಿಸಿ ಪ್ರಕಟಣೆಯಲ್ಲಿ ಕೋರಿದೆ.

error: