
ಅವರು ಕೃಷ್ಣರಾಜಪೇಟೆ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಕೊರೋನಾ ನಿಯಂತ್ರಣ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮಗಳ ಕುರಿತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯನ್ನು ನಡೆಸಿ ದಾನಿಗಳು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಲು ಉದಾರವಾಗಿ ಸಹಾಯ ಮಾಡಬೇಕು ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಠಕ್ಕೆ ಸಿಲುಕಿರುವ ಬಡಜನರ ಹಸಿವನ್ನು ನೀಗಿಸಲು ತಾಲೂಕು ಆಡಳಿತದೊಂದಿಗೆ ಕೈಜೋಡಿಸಿ ಸಹಕರಿಸಬೇಕು ಎಂದು ಸಚಿವ ನಾರಾಯಣಗೌಡ ಕೈಮುಗಿದು ಮನವಿ ಮಾಡಿದರು.
ಕೊರೋನಾ ಮಹಾಮಾರಿಯ ಬಗ್ಗೆ ಭಯ ಭೀತಿ ಬೇಡ…ಆರೋಗ್ಯ ಇಲಾಖೆಯು ನೀಡಿರುವ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಮನೆಯಿಂದ ಅನಗತ್ಯವಾಗಿ ಹೊರಗಡೆ ಬರಬಾರದು. ಕಡ್ಡಾಯವಾಗಿ ಮನೆಯಲ್ಲಿ ಇದ್ದುಕೊಂಡು ಕೊರೋನಾ ವೈರಾಣುಗಳು ಹರಡುವುದನ್ನು ನಿಯಂತ್ರಿಸಬೇಕು ಎಂದು ಮನವಿ ಮಾಡಿದ ಸಚಿವರು ರೈತರು ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು, ತಾವು ಕಷ್ಟಪಟ್ಟು ಬೆಳೆದಿರುವ ಹಣ್ಣು ತರಕಾರಿಗಳನ್ನು ಹಾಪ್ ಕಾಮ್ಸ್ ಮೂಲಕ ಖರೀದಿಸಿ ಗ್ರಾಹಕರಿಗೆ ವಿತರಿಸಲು ಕ್ರಮಕೈಗೊಳ್ಳಲಾಗಿದೆ ಇಡೀ ದೇಶವೇ ಕೊರೋನಾ ದಿಂದಾಗಿ ಸಂಕಷ್ಠಕ್ಕೆ ಸಿಲುಕಿದೆಯಾದ್ದರಿಂದ ಸಾರ್ವಜನಿಕರು ತಾಲೂಕು ಹಾಗೂ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಮುಖಕ್ಕೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೈಗಳನ್ನು ಆಗಾಗ್ಗೆ ಸ್ಯಾನಿಟೈಸರ್ ಹಾಗೂ ಸೋಪಿನಿಂದ ಕೈತೊಳೆದುಕೊಂಡು ವ್ಯಯಕ್ತಿಕ ಸ್ವಚ್ಛತೆ ಹಾಗೂ ನೈರ್ಮಲ್ಯವನ್ನು ಕಾಪಾಡಿಕೊಳ್ಳಬೇಕು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಜನಸಾಮಾನ್ಯರ ನೋವು ನಲಿವುಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು..ಇದು ಅಂತಿಮ ಎಚ್ಚರಿಕೆಯಾಗಿದೆ. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದುಕೊಂಡು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿ ಕೊರೋನಾ ನಿಯಂತ್ರಣಕ್ಕೆ ಮುಂದಾಗಬೇಕು..ಕರ್ತವ್ಯಲೋಪವೆಸಗುವ ಅಧಿಕಾರಿಗಳು ತಕ್ಕಶಾಸ್ತಿಯನ್ನು ಅನುಭವಿಸಬೇಕಾಗುತ್ತದೆ ಎಂದು ಸಚಿವ ನಾರಾಯಣಗೌಡ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ತಾಲೂಕು ಸಮಾಜಕಲ್ಯಾಣ ಅಧಿಕಾರಿ ಡಾ.ಮನುಕುಮಾರ್, ಸಬ್ ಇನ್ಸ್ ಪೆಕ್ಟರ್ ಗಳಾದ ಬ್ಯಾಟರಾಯಗೌಡ, ಲಕ್ಷ್ಮಣ್, ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್, ಪುರಸಭೆ ಸದಸ್ಯರಾದ ಶಾಮಿಯಾನ ತಿಮ್ಮೇಗೌಡ, ಗಿರೀಶ್, ದಿನೇಶ್, ಇಂದ್ರಾಣಿ ವಿಶ್ವನಾಥ್, ಮಹಾದೇವಿ ನಂಜುoಡ, ಕೆ.ಎಸ್.ಪ್ರಮೋದ್ ಮತ್ತಿತರರು ಉಪಸ್ಥಿತರಿದ್ದರು….
ವರದಿ. ಕೆ.ಆರ್.ನೀಲಕಂಠ.. ಕೃಷ್ಣರಾಜಪೇಟೆ..
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ