ಮಂಗಳವಾರ, ಶುಕ್ರವಾರ ಮತ್ತು ಭಾನುವಾರ ಮಾಂಸ ಮಾರಾಟ….
ಸಾಮಾಜಿಕ ಅಂತರ, ವಯಕ್ತಿಕ ಸ್ವಚ್ಛತೆ ಹಾಗೂ ನೈರ್ಮಲ್ಯವನ್ನು ಕಾಪಾಡಿಕೊಂಡು ಮಾಂಸ ಮಾರಾಟ ಮಾಡಬೇಕು ಎಂದು ಪುರಸಭೆ ಖಡಕ್ ಎಚ್ಚರಿಕೆ ನೀಡಿದೆ.
ಗುಣಮಟ್ಟದ ಮಾಂಸ ಮಾರಾಟ ಮಾಡಿ, ಜನಸಾಮಾನ್ಯರ ಆರೋಗ್ಯವನ್ನು ಕಾಪಾಡಿ ಎಂದು ಮುಖ್ಯಾಧಿಕಾರಿ ಸತೀಶ್ ಕುಮಾರ್ ಮತ್ತು ಪಟ್ಟಣ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ಕೈಮುಗಿದು ಮನವಿ ಮಾಡಿದರು.
ಮಾಂಸದAಗಡಿಗಳಲ್ಲಿ ಸ್ವಚ್ಛತೆ ಹಾಗೂ ಸಾಮಾಜಿಕ ಅಂತರ ಕಾಪಾಡದಿದ್ದರೆ ಅಂಗಡಿ ಬಂದ್ ಮಾಡುವ ಎಚ್ಚರಿಕೆ ನೀಡಿದ ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್… ಸಾರ್ವಜನಿಕರಿಗೆ ಗುಣಮಟ್ಟದ ಮಾಂಸವನ್ನು ನೀಡಿ ಸಮಾಜದ ಆರೋಗ್ಯ ಕಾಪಾಡಿ ಎಂದು ಮನವಿ ಮಾಡಿದರು. ಕೊರೋನಾ ಮಹಾಮಾರಿಯ ನಿಯಂತ್ರಣಕ್ಕೆ ನಾಗರಿಕ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು..ಅನಗತ್ಯವಾಗಿ ಮನೆಯಿಂದ ಹೊರಬಂದು ಓಡಾಡಿ ಕೊರೋನಾ ವೈರಾಣುಗಳು ಹರಡಲು ಅವಕಾಶ ನೀಡದೇ ಮನೆಯಲ್ಲಿದ್ದುಕೊಂಡು ಕೊರೋನಾ ಮಹಾಮಾರಿಯ ಅಟ್ಟಹಾಸ ತಡೆಯಬೇಕು, ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸಬೇಕು, ಕೈಗಳನ್ನು ಕಡ್ಡಾಯವಾಗಿ ಸ್ಯಾನಿಟೈಸರ್ ಹಾಗೂ ಸೋಪಿನಿಂದ ತೊಳೆದುಕೊಂಡು ಅಮೂಲ್ಯವಾದ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಮುಖ್ಯಾಧಿಕಾರಿ ಸತೀಶ್ ಮನವಿ ಮಾಡಿದರು.
ಕೆ.ಆರ್.ಪೇಟೆ ಪುರಸಭೆ ವ್ಯಾಪ್ತಿಯ ಸ್ಲಂಗಳಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಹಾಲು ವಿತರಣೆ ..
ಏಪ್ರಿಲ್ ೩ರ ಶುಕ್ರವಾರ ದಿಂದ ಕೃಷ್ಣರಾಜಪೇಟೆ ಪುರಸಭೆ ವ್ಯಾಪ್ತಿಯ ಸ್ಲಂಗಳಲ್ಲಿ ಬಡಜನರು, ಮಹಿಳೆಯರು ಹಾಗೂ ಮಕ್ಕಳಿಗೆ ಸರ್ಕಾರದ ಆದೇಶದಂತೆ ಹಾಲನ್ನು ವಿತರಿಸಲಾಗುವುದು ಎಂದು ಮುಖ್ಯಾಧಿಕಾರಿ ಸತೀಶ್ ಇದೇ ಸಂದರ್ಭದಲ್ಲಿ ತಿಳಿಸಿದರು.
ಕೃಷ್ಣರಾಜಪೇಟೆ ಪುರಸಭೆಯ ವ್ಯಾಪ್ತಿಯ ಮಾಂಸ ವ್ಯಾಪಾರಿಗಳು ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಕೊರೋನಾ ನಿಯಂತ್ರಣಕ್ಕೆ ತಾಲೂಕು ಆಡಳಿತಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ವರದಿ. ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ .
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ