May 28, 2023

Bhavana Tv

Its Your Channel

ಕರ್ನಾಟಕದಲ್ಲಿ ಕೊರೋನಾಗೆ ಮತ್ತೊಂದು ಬಲಿ..! ರಾಜ್ಯದಲ್ಲಿ 7 ಕ್ಕೇರಿದ ಸಾವಿನ ಸಂಖ್ಯೆ..!

ಬೆಂಗಳೂರು : ಕೊರೊನಾ ಮಹಾಮಾರಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಕಲಬುರಗಿಯಲ್ಲಿ ಸೋಂಕಿತ ವ್ಯಕ್ತಿಯೊಬ್ಬ ಸೋಮವಾರ ಅಸುನೀಗಿದ್ದಾನೆ. ಇದರಿಂದಾಗಿ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.

ವಿಶೇಷವೆಂದರೆ ಕೊರೊನಾದಿಂದಾಗಿ ಕಲಬುರಗಿ ಜಿಲ್ಲೆಯೊಂದರಲ್ಲೇ ಈ ವರೆಗೂ 3 ಸಾವನ್ನಪ್ಪಿದ್ದಾರೆ. ಕಲಬುರಗಿಯ ಮೋವಿನ್ ಪುರದ 55 ವರ್ಷದ ಬಟ್ಟೆ ವ್ಯಾಪಾರಿಯನ್ನು ಸೋಂಕು ತಗಲಿದ ಹಿನ್ನೆಲೆಯಲ್ಲಿ ಇಲ್ಲಿನ ಇಎಸ್ ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದನೆಂದು ವೈದ್ಯರು ತಿಳಿಸಿದ್ದಾರೆ. ರಾಜ್ಯದಲ್ಲಿ ಮೊದಲ ಪ್ರಕರಣ
ಕಲಬುರಗಿ ಜಿಲ್ಲೆಯಲ್ಲಿ ನಡೆದಿತ್ತು. ಇದೀಗ ಮೂರನೇ ಪ್ರಕರಣ ಅದೇ ಜಿಲ್ಲೆಯಲ್ಲಿ ಸಂಭವಿಸಿರುವ ಕಾರಣ, ಜನತೆ ಆತಂಕಕ್ಕೆ ಈಡಾಗಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗಬಹುದೆಂಬ ನಿರೀಕ್ಷಿ ಹುಸಿಯಾಗಿದ್ದು ಸೋಮವಾರ ಹೊಸ 15 ಪ್ರಕರಣಗಳು ಪತ್ತೆಯಾಗಿದ್ದು, ಇಲ್ಲಿಯವರೆಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 247ಕ್ಕೆ ಏರಿಕೆಯಾಗಿದೆ. ಈ ಪೈಕಿ ಮೂವರು ಮಕ್ಕಳು ಕೂಡ ಸೇರಿದ್ದಾರೆ.

ರಾಜ್ಯದಲ್ಲಿ 8, 14 ಹಾಗೂ 16 ವರ್ಷದ ಮಕ್ಕಳಲ್ಲಿ ಹೊಸದಾಗಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದ್ದು, ಭಾನುವಾರ ಸಂಜೆಯಿಂದ ಸೋಮವಾರ ಸಂಜೆಯವರೆಗೆ15 ಹೊಸ ಪ್ರಕರಣಗಳು ಪತ್ತೆಯಾಗಿದೆ.ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 247ಕ್ಕೇರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಪತ್ತೆಯಾದ 15 ಕೊರೋನಾ ಪಾಸಿಟಿವ್​​ ಪ್ರಕರಣಗಳಿಗೂ ದೆಹಲಿಯ ನಿಜಾಮುದ್ದೀನ್​​​ ಧಾರ್ಮಿಕ ಸಭೆಗೂ ನಂಟಿದೆ ಎಂದು ಹೇಳಲಾಗುತ್ತಿದೆ. ಈ 15 ಮಂದಿಯೂ ಈ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದರು. ದೊಡ್ಡಬಳ್ಳಾಪುರದಲ್ಲಿ ಮೊದಲ ಕೊರೋನಾ ಪಾಸಿಟಿವ್​​​ ಪ್ರಕರಣ ಪತ್ತೆಯಾಗಿದ್ದು, ಈ ವ್ಯಕ್ತಿಗೆ ದೆಹಲಿ ಟ್ರಾವೆಲ್​​ ಹಿಸ್ಟರಿ ಇತ್ತು ಎಂದು ತಿಳಿದು ಬಂದಿದೆ.

ಪ್ರಮುಖವಾಗಿ ಧಾರವಾಡದಲ್ಲಿ 4 ಪ್ರಕರಣಗಳು ದಾಖಲಾಗಿದ್ದು, ಮಳವಳ್ಳಿಯಲ್ಲಿ 3, ಬೀದರ್ ನಲ್ಲಿ 2, ಬಾಗಲಕೋಟೆಯಲ್ಲಿ 1, ಬೆಳಗಾವಿಯ ರಾಯಭಾಗದಲ್ಲಿ, ದೊಡ್ಡಬಳ್ಳಾಪುರದಲ್ಲಿ 1 ಹಾಗೂ ಬೆಂಗಳೂರು ನಗರದ 1 ಪ್ರಕರಣ ವರದಿಯಾಗಿದೆ. ಈ ವರೆಗೂ 60 ಜನ ಡಿಸ್ಜಾರ್ಜ್ ಆಗಿದ್ದಾರೆ.

source : dailyhunt.in

About Post Author

error: