October 5, 2024

Bhavana Tv

Its Your Channel

ಕಾರ್ಮಿಕರ ವೇತನ ಕಡಿತ, ಕೆಲಸದಿಂದ ವಜಾ ಮಾಡುವಂತಿಲ್ಲ: ಕಾರ್ಮಿಕ ಇಲಾಖೆ ಮಹತ್ವದ ಆದೇಶ

ಬೆಂಗಳೂರು, ಎ.13: ಕೊರೋನ ಸೋಂಕು ತಡೆಗಟ್ಟುವ ಹಿನ್ನೆಲೆ ಸರಕಾರ ಜಾರಿಗೊಳಿಸಿರುವ ಲಾಕ್‍ಡೌನ್ ಪರಿಸ್ಥಿತಿಯಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಸ್ಥೆಗಳಲ್ಲಿರುವ ಉದ್ಯೋಗಿಗಳ ವೇತನ ಕಡಿತಗೊಳಿಸುವಂತಿಲ್ಲ. ಜತೆಗೆ ಅವರನ್ನು ಕೆಲಸದಿಂದ ವಜಾಗೊಳಿಸಬಾರದೆಂದು ಕಾರ್ಮಿಕ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಕೋವಿಡ್-19 ತುರ್ತು ಪರಿಸ್ಥಿತಿಯ ಸನ್ನಿವೇಶದಲ್ಲಿ ಎಲ್ಲ ಸಾರ್ವಜನಿಕ, ಖಾಸಗಿ ಸಂಸ್ಥೆಗಳ ಉದ್ಯೋಗದಾತರನ್ನು ವಿಶೇಷವಾಗಿ ಹಂಗಾಮಿ ಕೆಲಸಗಾರರನ್ನು ಅಥವಾ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಬಾರದು. ಅದೇ ರೀತಿ, ಅವರ ವೇತನವನ್ನು ಕಡಿತಗೊಳಿಸಬಾರದು ಎಂದು ಸೂಚಿಸಲಾಗಿದೆ.

ಯಾವುದೇ ಕೆಲಸಗಾರರು ಈ ಅವಧಿಯಲ್ಲಿ ರಜೆ ತೆಗೆದುಕೊಂಡಿದ್ದಲ್ಲಿ ಅವರ ವೇತನದಲ್ಲಿ ಕಡಿತವಿಲ್ಲದೇ ಹಾಗೂ ಕರ್ತವ್ಯದಲ್ಲಿದ್ದಾರೆಂದು ಪರಿಗಣಿಸಲಾಗುವುದು. ಈ ಸಂಬಂಧ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಮಾಹಿತಿಗಾಗಿ ಸಹಾಯವಾಣಿ ಪ್ರಾರಂಭಿಸಲಾಗುವುದೆಂದು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಪಿ.ಕ್ಯಾಪ್ಟನ್ ಮಣಿವಣ್ಣನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

source : dailyhunt.in

error: