ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡಾ ಕೊರೊನಾ ಸೋಂಕಿನ ಸರಣಿ ಮುಂದುವರೆದಿದ್ದು, ರಾಜ್ಯದಲ್ಲಿ ಇಂದು ಒಂದೇ ದಿನ 12 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 371ಕ್ಕೇ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಿಂದಾಗಿ ತಿಳಿದು ಬಂದಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಹೊಸದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 12 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಹೀಗಾಗಿ ಸೋಂಕಿತರ ಸಂಖ್ಯೆ 371ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ.
ಕಲಬುರ್ಗಿಯ ಇಬ್ಬರಿಗೆ, ವಿಜಯಪುರದ ಒಬ್ಬರಿಗೆ, ಧಾರವಾಡದ ಒಬ್ಬರಿಗೆ, ಬೆಳಗಾವಿಯ ಒಬ್ಬರಿಗೆ, ಮೈಸೂರಿನ ಮೂವರಿಗೆ, ಬಾಗಲಕೋಟೆಯ ಇಬ್ಬರಿಗೆ, ಗದಗ ಒಬ್ಬರಿಗೆ ಮತ್ತು ಮಂಡ್ಯದ ಒಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವಂತ ಹೆಲ್ತ್ ಬುಲೆಟಿನ್ ನಿಂದಾಗಿ ತಿಳಿದು ಬಂದಿದೆ.
ಒಟ್ಟಾರೆಯಾಗಿ ಹೊಸದಾಗಿ 12 ಜನರಿಗೆ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಆಗಿ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 371ಕ್ಕೆ ಏರಿಕೆಯಾಗಿದೆ. ಇದುವರೆಗೆ ಕೊರೊನಾ ಸೋಂಕಿನಿಂದ 13 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದರೇ, 92 ಕೊರೊನಾ ವೈರಸ್ ಸೋಂಕು ಪೀಡಿತರು ಗುಣಮುಖರಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಿಂದಾಗಿ ತಿಳಿದು ಬಂದಿದೆ.
source ; dailyhunt
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ