March 22, 2023

Bhavana Tv

Its Your Channel

ಸುದ್ದಿಕೊಡುವ ಭರದಲ್ಲಿ ಇಹಲೋಕ ತ್ಯೆಜಿಸಿದ ಪತ್ರಕರ್ತ : ಹನುಮಂತು ಕುಟುಂಬಕ್ಕೆ ನೆರವಾದ ಎಚ್ಡಿಕೆ

ರಾಮನಗರ : ವರದಿಗಾರಿಕೆ ಮುಗಿಸಿ ವಾಪಾಸಾಗುತ್ತಿದ್ದ ವೇಳೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಖಾಸಗಿ ವಾಹಿನಿಯ ಜಿಲ್ಲಾ ವರದಿಗಾರ ಹನುಮಂತು ಮೃತಪಟ್ಟಿದ್ದಾರೆ. ಪಾದರಾಯನಪುರದ ಗಲಭೆ ಆರೋಪಿಗಳನ್ನು ರಾಮನಗರದ ಜಿಲ್ಲಾ ಕಾರಾಗೃಹಕ್ಕೆ ಶೀಫ್ಟ್ ಮಾಡಿದ್ದರು. ಈ ಸುದ್ದಿಯನ್ನು ಮುಗಿಸಿಕೊಂಡು ವಾಪಸಾಗುತ್ತಿದ್ದ ವೇಳೆಯಲ್ಲಿ ಎಟಿಎಂಗೆ ಹಣ ತುಂಬುವ ವಾಹನಕ್ಕೆ ಢಿಕ್ಕಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವರದಿಗಾರ ಹನುಮಂತು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಳೆದ 6 ವರ್ಷಗಳಿಂದಲೂ ಹನುಮಂತು ಪಬ್ಲಿಕ್ ಟಿವಿಯ ರಾಮನಗರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾಧ್ಯಮ ಲೋಕದಲ್ಲಿ ಉತ್ತಮ ಹೆಸರನ್ನು ಸಂಪಾದಿಸಿದ್ದ ಹನುಮಂತು ನಿಧನಕ್ಕೆ ರಾಮನಗರ ಜಿಲ್ಲಾ ಪತ್ರಕರ್ತರ ಸಂಘ ಹಾಗೂ ರಾಜ್ಯದ ಪತ್ರಕರ್ತರು ಕಂಬನಿ ಮಿಡಿದಿದ್ದಾರೆ.
ರಸ್ತೆ ಅಪಘಾತದಲ್ಲಿ ಮೃತಪಟ್ಟಿರೋ ಹನುಮಂತು ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ಹನುಮಂತು ಕುಟುಂಬಕ್ಕೆ 5 ಲಕ್ಷ ರೂಪಾಯಿ ವೈಯಕ್ತಿಕ ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಆರೋಗ್ಯ ಸಮಸ್ಯೆಯಿರುವ ಹನುಮಂತುವಿನ ಮಗುವಿನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿಯೂ ತಿಳಿಸಿದ್ದಾರೆ

About Post Author

error: