December 22, 2024

Bhavana Tv

Its Your Channel

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರಿ ನಿವಾಸದ ಬಳಿ ಕರ್ತವ್ಯದಲ್ಲಿದ್ದ ಇಬ್ಬರು ಮಹಿಳಾ ಪೊಲೀಸ್​ ಸಿಬ್ಬಂದಿಗೆ ಕೊರೊನಾ ಸೋಂಕು

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯ ಮಲ್ಬಾರ್ ಹಿಲ್​​ನಲ್ಲಿರುವ ಸರ್ಕಾರಿ ನಿವಾಸ ವರ್ಷಾದ ಬಳಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ನಾಲ್ವರು ಪೊಲೀಸರಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದೆ.

ಉದ್ಧವ್​ ಠಾಕ್ರೆಯವರ ನಿವಾಸದ ಬಳಿ ಇಬ್ಬರು ಮಹಿಳಾ ಪೊಲೀಸ್ ಅಧಿಕಾರಿಗಳು, ಓರ್ವ ಅಸಿಸ್ಟಂಟ್​ ಪೊಲೀಸ್ ಇನ್ಸ್​ಪೆಕ್ಟರ್​ ಮತ್ತು ಓರ್ವ ಪೇದೆಯನ್ನು ನಿಯೋಜಿಸಲಾಗಿತ್ತು. ಈಗ ಇಬ್ಬರು ಮಹಿಳಾ ಪೊಲೀಸ್​ ಅಧಿಕಾರಿಗಳಿಗೆ ಕರೊನಾ ವೈರಸ್ ತಗುಲಿದ್ದು ದೃಢಪಟ್ಟಿದೆ. ಅವರೊಂದಿಗೆ ಕರ್ತವ್ಯದಲ್ಲಿದ್ದ ಉಳಿದ ಇಬ್ಬರನ್ನು ಸೇರಿಸಿ, ಒಟ್ಟು ಆರು ಮಂದಿ ಪೊಲೀಸರನ್ನು ಕ್ವಾರಂಟೈನ್​ಗೆ ಒಳಪಡಿಸಲಾಗಿದೆ.

ಉದ್ಧವ್​ ಠಾಕ್ರೆಯವರು ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿಯೇ ಇದ್ದು, ಕೆಲಸದ ನಿಮಿತ್ತ ಆಗಾಗ ಈ ಸರ್ಕಾರಿ ಮನೆಗೆ ಬರುತ್ತಿದ್ದರು.

ದಕ್ಷಿಣ ಮುಂಬೈನಲ್ಲಿರುವ ಈ ಮಲ್ಬಾರ್​ ಹಿಲ್​ ಏರಿಯಾದಲ್ಲಿ ಮುಖ್ಯಮಂತ್ರಿ ಸೇರಿ ಹಲವು ಸಚಿವರ ನಿವಾಸಗಳಿವೆ.
ಆ ಸ್ಥಳದಲ್ಲಿ ನಿಯೋಜನೆಗೊಂಡಿದ್ದ ಎಲ್ಲ ಪೊಲೀಸರ ರಕ್ತ ಮತ್ತು ಗಂಟಲಿನ ದ್ರವದ ಮಾದರಿಯನ್ನು ತೆಗೆದುಕೊಳ್ಳಲಾಗಿದ್ದು, ತಪಾಸಣೆಗೆ ಒಳಪಡಿಸಲಾಗುವುದು ಎಂದು ಹೇಳಲಾಗಿದೆ.

source ; dailyhunt

error: