October 3, 2024

Bhavana Tv

Its Your Channel

ಬೆಳಗಾವಿಯಲ್ಲಿ ಇಂದು 8 ವರ್ಷದ ಮಗು ಸೇರಿ 9 ಜನರಿಗೆ ಕೊರೊನಾ ಸೋಂಕು

ಬೆಂಗಳೂರು – ರಾಜ್ಯದಲ್ಲಿ ಇಂದು ಒಂದೇ ದಿನ 26 ಜನರಿಗೆ ಕೊರೋನಾ ಸೋಂಕು ಹರಡಿದೆ. ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ಇಂದು 9 ಜನರಿಗೆ ಸೋಂಕು ದೃಢಪಟ್ಟಿದ್ದು, ಎಲ್ಲವೂ ರೋಗಿ ನಂಬರ್ 128ರಿಂದಲೇ ಬಂದಿದೆ.

ಹಿರೇಬಾಗೇವಾಡಿಯಿಂದ ನಿಜಾಮುದ್ದೀನಿ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯಿಂದಲೇ ಸೋಂಕು ತೀವ್ರವಾಗಿ ಹರಡುತ್ತಿದೆ. ಹಿರೇಬಾಗೇವಾಡಿ ಗ್ರಾಮದಲ್ಲಿ 25 ಜನರಿಗೆ ಸೋಂಕು ತಗುಲಿದಂತಾಗಿದೆ.

ರಾಜ್ಯದಲ್ಲಿ ಇಂದು ಒಂದೇ ದಿನ 26 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಅದರಲ್ಲಿ ಬೆಳಗಾವಿಯಲ್ಲಿ 8 ವರ್ಷದ ಮಗು ಸೇರಿದಂತೆ 9 ಜನರಲ್ಲಿ ಸೋಂಕು ದೃಢಪಟ್ಟಿದೆ.

ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ ಇಂದು ಪತ್ತೆಯಾದ ಎಲ್ಲಾ ಕೊರೊನಾ ಸೋಂಕಿತರು ತಬ್ಲಿಗಿಗಳ ದ್ವಿತೀಯ ಸಂಪರ್ಕದಲ್ಲಿ ಇದ್ದರು ಎಂಬ ಸಂಗತಿ ಬಯಲಾಗಿದೆ.

ಇನ್ನು ಬೆಂಗಳೂರಿನಲ್ಲಿ 6 ವರ್ಷದ ಮಗು ಸೇರಿಂದಂತೆ ಸಿಲಿಕಾನ್ ಸಿಟಿಯೊಂದರಲ್ಲೇ ಒಟ್ಟು 13 ಜನರಲ್ಲಿ ಇಂದು ಕೊರೊನಾ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಚಿಕ್ಕ ಮಕ್ಕಳಲ್ಲೂ ಕೊರೊನಾ ಸೋಂಕು ಹರಡುತ್ತಿರುವುದು ಆತಂಕವನ್ನುಂಟು ಮಾಡಿದೆ.

source ; ಪ್ರಗತಿವಾಹಿನಿ 

error: