June 8, 2023

Bhavana Tv

Its Your Channel

ಲಾಕ್‍ಡೌನ್ ಮುಗಿದ ಬಳಿಕ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬಗ್ಗೆ ನಿರ್ಧಾರ

ಚಾಮರಾಜನಗರ: ಲಾಕ್‍ಡೌನ್ ಅವಧಿ ಮುಗಿದ ನಂತರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾಡಲಾಗುತ್ತದೆ. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್, ಮೇ 3 ರ ನಂತರ ಎಸ್ ಎಸ್ ಎಲ್ ಸಿ ಪರೀಕ್ಷೆ ಬಗ್ಗೆ ನಿರ್ಧರಿಸಲಾಗುವುದು. ಎಸ್‍ಎಸ್‍ಎಲ್ ಸಿ ಪರೀಕ್ಷೆಗಿಂತ ದೊಡ್ಡದು ಸಧ್ಯಕ್ಕೆ ಕೊರೊನಾ ವಿರುದ್ಧ ಹೋರಾಡುವ ಪರೀಕ್ಷೆ ಎಂದರು.

ಕೆಲವರು ಪರೀಕ್ಷೆ ಅನುಮಾನವೆಂದು ಗೊಂದಲ ಮೂಡಿಸುತ್ತಿದ್ದಾರೆ. ಆದರೆ ಪರೀಕ್ಷೆ ನಡೆಯುತ್ತದೆ. ಮಕ್ಕಳ ಮನಸ್ಸಿನಲ್ಲಿ ಪರೀಕ್ಷೆ ಬಗ್ಗೆ ಗೊಂದಲವಿಲ್ಲ. ಆದರೆ ಪೋಷಕರಲ್ಲಿ ಆತಂಕ ಇದೆ. ಮೇ 3ರ ನಂತರ ಒಂದು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜಕೀಯ ಬೇಡ. ರಾಜ್ಯ ಸರ್ಕಾರ ಯಾವುದೋ ಒಂದು ಜಿಲ್ಲೆಯನ್ನ ರೆಡ್ ಝೋನ್ ಮಾಡಲು ಪಾದರಾಯನಪುರ ಗಲಾಟೆ ಆರೋಪಿಗಳನ್ನು ರಾಮನಗರ ಜೈಲಿಗೆ ಶಿಪ್ಟ್ ಮಾಡಿರಲಿಲ್ಲ. ಯಾವುದೋ ನಿರ್ಧಾರ ಹೆಚ್ಚು ಕಮ್ಮಿಯಾಗಿದೆ ಎಂದು ಹೇಳಿದರು.

source : ಪ್ರಗತಿವಾಹಿನಿ

About Post Author

error: