ಧಾರವಾಡ: ಕೊರೊನಾ ಭೀತಿ ನಡುವೆಯೂ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರ ಕೆಲಸವನ್ನು ಮೆಚ್ಚಿದ ಕೆಎಂಎಫ್ ಅಧಿಕಾರಿಯೊಬ್ಬರು ಅವರ ಪಾದ ಪೂಜೆಯನ್ನ ಮಾಡಿ ಗೌರವ ಸಲ್ಲಿಸಿದ್ದಾರೆ.
ಧಾರವಾಡ ನಗರದ ಟೋಲ್‍ನಾಕಾದಲ್ಲಿ ಪ್ರತಿ ದಿನ 30ಕ್ಕೂ ಹೆಚ್ಚು ಪೌರಕಾರ್ಮಿಕರು ಈ ಕೊರೊನಾ ಸಂಕಷ್ಟದ ಸಮಯದಲ್ಲಿ ಕೂಡಾ ಬೆಳಗಿನ ಜಾವವೇ ಬಂದು ಕಸ ತೆಗೆದುಕೊಂಡು ಹೋಗುವುದು, ರಸ್ತೆ ಸ್ವಚ್ಛ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ಇದನ್ನ ಧಾರವಾಡ ಕೆಎಂಎಫ್‍ನ ಟೆಕ್ನಿಕಲ್ ಆಫಿಸರ್ ನಾಗಪ್ಪ ಅರಳೋದ ಅವರು ಕಳೆದ ಒಂದು ತಿಂಗಳಿಂದ ಗಮನಿಸುತ್ತಾ ಬಂದಿದ್ದರು. ಇಂದು ಈ ಪೌರ ಕಾರ್ಮಿಕರ ನಿಸ್ವಾರ್ಥ ಸೇವೆಗೆ ಅವರ ಪಾದ ಪೂಜೆಯನ್ನ ಮಾಡಿ ಗೌರವ ಸಲ್ಲಿಸಿದ್ದಾರೆ.
ಅಲ್ಲದೇ ಪೌರಕಾರ್ಮಿಕರಿಗೆ ತುಪ್ಪ ಹಾಗೂ ಪೇಡಾ ನೀಡಿ, ಜೊತೆಗೆ ದಿನಸಿ ಕಿಟ್ ಕೂಡಾ ಕೊಟ್ಟು ಗೌರವಿಸಿದ್ದಾರೆ.
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ