April 1, 2023

Bhavana Tv

Its Your Channel

ರಾಜ್ಯದಲ್ಲಿ ಇಂದು ದಾಖಲೆ ಪ್ರಮಾಣದಲ್ಲಿ ಇಳಿಕೆಯಾದ ಕೊರೊನಾ ಸೋಂಕು

ಕಲಬುರಗಿಯಲ್ಲಿ 7 ವರ್ಷದ ಬಾಲಕನಲ್ಲೂ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಮಾಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ಇಂದು ಕೇವಲ ಮೂರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ.

ಸಂಜೆ ಆರೋಗ್ಯ ಇಲಾಖೆ ನೀಡಿದ ಹೆಲ್ತ್ ಬುಲೆಟಿನ್ ಪ್ರಕಾರ ಇಂದು ರಾಜ್ಯದಲ್ಲಿ ಮೂರು ಜನರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆಯಾಗಿದೆ. ಕೊರೊನಾ ಹಾಟ್ ಸ್ಪಾಟ್ ಗಳಾದ ಬೆಂಗಳೂರು, ಮೈಸೂರು, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಪತ್ತೆಯಾಗದಿರುವುದು ಸಮಾಧಾನಕರ ಸಂಗತಿ.

ಕಲಬುರಗಿಯಲ್ಲಿ ಎರಡು ಪ್ರಕರಣ ಪತ್ತೆಯಾಗಿದ್ದು, 7 ವರ್ಷದ ಬಾಲಕ ಹಾಗೂ 65 ವರ್ಷದ ಹಿರಿಯ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢ ಪಟ್ಟಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 47 ವರ್ಷದ ಮಹಿಳೆಯಲ್ಲಿ ಸೋಂಕು ದೃಢ ಪಟ್ಟಿದೆ.

sousrce : ಪ್ರಗತಿವಾಹಿನಿ

About Post Author

error: