September 25, 2023

Bhavana Tv

Its Your Channel

ರಾಜ್ಯದಲ್ಲಿ ಇಂದು ಕೊರೊನಾಗೆ ಇಬ್ಬರು ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು 12 ಜನರಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 601ಕ್ಕೆ ಏರಿಕೆಯಾಗಿದೆ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ, ಬೀದರ್ 1, ತುಮಕೂರಿನಲ್ಲಿ 2, ಚಿಕ್ಕಬಳ್ಳಾಪುರದಲ್ಲಿ 1, ವಿಜಯಪುರದಲ್ಲಿ 2, ಬೆಳಗಾವಿಯಲ್ಲಿ 1, ಬಾಗಲಕೋಟೆಯ ಜಮಖಂಡಿಯಲ್ಲಿ 1 ಹಾಗೂ ಬೆಂಗಳೂರು ನಗರದಲ್ಲಿ 4 ಪ್ರಕರಣಗಳು ಪತ್ತೆಯಾಗಿರುವುದಾಗಿದೆ.

ಬೆಂಗಳೂರಿನಲ್ಲಿ ರೋಗಿ ನಂಬರ್ 557, 63ವರ್ಷದ ವೃದ್ಧ ಹಾಗೂ ಬೀದರಿನಲ್ಲಿ 83 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಕೊರೊನಾ ವೈರಸ್ ನಿಂದ 25 ಮಂದಿ ಸಾವನ್ನಪ್ಪಿದ್ದು, 271 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿತ ಏಳು ಜನರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

source : ಪ್ರಗತಿವಾಹಿನಿ ಸುದ್ದಿ

error: