ನಿತ್ಯೋತ್ಸವ ಕವಿ’ ಎಂದೇ ಪ್ರಸಿದ್ಧರಾದ ನಿಸಾರ್ ಅಹಮದ್‍ರವರವರು ಇಂದು ಬೆಂಗಳೂರಿನ ತಮ್ಮ ಸ್ವಗ್ರಹದಲ್ಲಿ ನಿಧನರಾದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಈ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು.
ನವೋದಯ ಹಾಗೂ ನವ್ಯ ಕಾವ್ಯ ಪರಂಪರೆಗಳಲ್ಲಿ ಉತ್ತಮ ಅಂಶಗಳನ್ನು ಪಡೆದು, ತಮ್ಮ ಕಾವ್ಯಗಳಲ್ಲಿ ಪ್ರಯೋಗಿಸಿ ತಮ್ಮದೇ ಆದ ವೈಶಿಷ್ಟ್ಯವನ್ನು ಬೆಳೆಸಿದ ಶ್ರೇಷ್ಠ ಕವಿಗಳಲ್ಲೊಬ್ಬರಾಗಿದ್ದಾರೆ. ಶ್ರೀ ಅಹಮದ್ ರವರ ಪೂರ್ಣ ಹೆಸರು ‘ಕೊಕ್ಕರೆ ಹೊಸಳ್ಳಿ ಶೇಖಹೈದರ ನಿಸಾರ್ ಅಹಮದ್’ ಎಂದಾಗಿತ್ತು.
ಪ್ರೊ. ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ ೫,೧೯೩೬ರಲ್ಲಿ ಜನಿಸಿದರು. ೧೯೫೯ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ೧೯೯೪ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾಗಿದ್ದರು.
ಸುಮಾರು 25 ಕೃತಿಗಳನ್ನು ರಚಿಸಿದ ಅವರು ಅನೇಕ ರಾಜ್ಯಮಟ್ಟದ ಪ್ರಶಸ್ತಿಗಳನ್ನು ಪಡೆದವರು. ಗಾಂಧಿಬಜಾರ್ ಹಾಗೂ ನಿತ್ಯೋತ್ಸವದ ಮೂಲಕ ಜನರ ಮನದ ಬಾಗಿಲು ತೆರೆದವರು. ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕೆಂಪೇಗೌಡ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಗಳಂತಹ ಅನೇಕ ಪ್ರಶಸ್ತಿ ಪಡೆದವರು.
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ