ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಇನ್ನು ಮುಂದೆ ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಿದೆ.
ಕರ್ನಾಟಕ ಸಾಂಕ್ರಾಮಿಕ ರೋಗ ನಿಯಮಾವಳಿ 2020 ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಈ ಸುಗ್ರೀವಾಜ್ಞೆ ಪ್ರಕಾರ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಮಾಸ್ಕ್ ಇಲ್ಲವೆ, ಕರವಸ್ತ್ರ, ಅಥವಾ ಬಟ್ಟೆಯನ್ನು ಬಾಯಿ, ಮೂಗು ಮುಚ್ಚುವಂತೆ ಧರಿಸುವುದು ಕಡ್ಡಾಯವಾಗಿದೆ.
ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ
ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಅದೇ ರೀತಿ ಪರಸ್ಪರ ಒಂದು ಮೀಟರ್ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.
ಈ ನಿಯಮವನ್ನು ಉಲ್ಲಂಘಿಸಿದವರ ವಿರುದ್ಧ ದಂಡ ಪ್ರಯೋಗ ಮಾಡಲಾಗುತ್ತದೆ ಎಂದು ಆದೇಶ ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘನೆ ಮಾಡಿದರೆ ಸ್ಥಳದಲ್ಲೇ 200 ರೂ. ದಂಡ ವಿಧಿಸಲಾಗುತ್ತದೆ.
ಇನ್ನು ಪಾಲಿಕೆ ವ್ಯಾಪ್ತಿಯ ಹೊರಗಡೆ ನಿಯಮ ಉಲ್ಲಂಘನೆ ಮಾಡಿದರೆ 100 ರೂ. ದಂಡ ವಿಧಿಸಲಾಗುತ್ತದೆ. ಸಬ್ ಇನ್ಸ್‌ಪೆಕ್ಟರ್ ಮತ್ತು ಮೇಲ್ಪಟ್ಟ ಪೊಲೀಸ್ ಅಧಿಕಾರಿಗಳು, ಪಾಲಿಕೆಯ ಆರೋಗ್ಯಾಧಿಕಾರಿ, ಪಿಡಿಒಗಳಿಗೆ ದಂಡ ವಿಧಿಸುವ ಅಧಿಕಾರ ನೀಡಲಾಗಿದೆ.
source ; Dailyhunt
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ