November 26, 2023

Bhavana Tv

Its Your Channel

ಕರೋನಾ ಆತಂಕದ ಪಾಸ್ ಪಡೆದು ಪ್ರಯಾಣಿಕೆ ಬಗ್ಗೆ ರಾಜ್ಯ ಸರ್ಕಾರದಿಂದ ನೂತನ ಆದೇಶ

ಹೊರ ದೇಶ ಹಾಗೂ ರಾಜ್ಯಗಳಿಂದ ಬರುವವರಿಗೆ ಹೊಸ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು,ಕ್ವಾರಂಟೈನ್‌ ಸೇರಿದಂತೆ ಹಲವು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವವರಿಗೆ ಮಾತ್ರ ಬರುವುದಕ್ಕೆ ಅವಕಾಶ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಇನ್ಮುಂದೆ ಮೃತದೇಹಗಳನ್ನು ರಾಜ್ಯದಲ್ಲಿ ಸಾಗಿಸಲು ಅವಕಾಶ ಇರುವುದಿಲ್ಲ, ಹೊರ ರಾಜ್ಯಗಳಲ್ಲಿ ಮೃತಪಟ್ಟ ವರ ದೇಹಗಳನ್ನೂ ರಾಜ್ಯಕ್ಕೆ ತರುವಂತಿಲ್ಲ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.ಜೊತೆಗೆ ಬೇರೆ ಬೇರೆ ದೇಶ ಹಾಗೂ ರಾಜ್ಯಗಳಿಂದ ಕನ್ನಡಿಗರು ವಾಪಸ್ ಬರುತ್ತಿದ್ದು ಅವರನ್ನು ಯಾವ ರೀತಿ ಕ್ವಾರಂಟೈನ್ ಮಾಡಬೇಕು ಅನ್ನೋ ಬಗ್ಗೆಯೂ ಸರ್ಕಾರ ಸೂಚಿಸಿದೆ.

ಕೇಂದ್ರ ಸರ್ಕಾರದ ಒಂದೇ ಮಾತರಂ ಹಾಗೂ ಬೇರೆ ರಾಜ್ಯಗಳಿಂದ ಬರಲು ಮೂರನೇ ಹಂತದ ಲಾಕ್‌ಡೌನ್ ಸಂದರ್ಭದಲ್ಲಿ ಅವಕಾಶ ಕೊಡಲಾಗಿದೆ.
ಹೊರ ದೇಶ ಹಾಗೂ ಹೊರ ರಾಜ್ಯಗಳಿಂದ ಬರುವವರಿಗೆ,ಅನಿವಾರ್ಯ ಸಂದರ್ಭಗಳಲ್ಲಿ ಮೃತದೇಹಗಳನ್ನು ತರುವವರಿಗೆ ಹಲವು ಷರತ್ತುಗಳನ್ನು ಹಾಕಲಾಗಿದೆ. ಷರತ್ತುಗಳನ್ನು ಪಾಲಿಸಲು ಒಪ್ಪಿಕೊಳ್ಳುವವರಿಗೆ ಮಾತ್ರ ಅನುಮತಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಆನ್‌ಲೈನ್‌ ನೋಂದಣಿ ಖಡ್ಡಾಯ : ಹೊರ ರಾಜ್ಯದಿಂದ ರಾಜ್ಯಕ್ಕೆ ಬರುವ ಕನ್ನಡಿಗರು‌ ನಿರ್ದಿಷ್ಟ ವ್ಯವಸ್ಥೆಯಡಿ ಬರುವಂತೆ ಮಾಡಬೇಕು. ಹೀಗಾಗಿ ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಲೇಬೇಕು. ರಾಜ್ಯಕ್ಕೆ ಬರುವವರು‌ ಕಡ್ಡಾಯವಾಗಿ ರಾಜ್ಯದಿಂದ ಅನಿರ್ವಾಯವಾಗಿ ಹೊರ ಹೋಗಿ ಸಿಕ್ಕಿಹಾಕಿ ಕೊಂಡಿರುವವರಾಗಿರಬೇಕು. ಎಲ್ಲಿಗೆ ಬರುತ್ತೇವೆ ಮತ್ತು ಎಂದು ಬರುತ್ತೇವೆ ಅನ್ನೋದನ್ನ ನೋಂದಣಿಯಲ್ಲಿ ತಿಳಿಸಬೇಕು ಎಂದು ಸೂಚಿಸಲಾಗಿದೆ.

error: