February 12, 2025

Bhavana Tv

Its Your Channel

ಪಿಯು ವಿದ್ಯಾರ್ಥಿಗಳಿಗೆ ಗುಡ್​​ನ್ಯೂಸ್; ನೀವಿರೋ ಜಿಲ್ಲೆಯಿಂದಲೇ ಇಂಗ್ಲೀಷ್ ಪರೀಕ್ಷೆ ಬರೆಯಬಹುದು.

ಬೆಂಗಳೂರು: ಕೊರೊನಾ ಹಿನ್ನೆಲೆ ಲಾಕ್​ಡೌನ್ ಜಾರಿ ಮಾಡಿದ್ರಿಂದ ದ್ವಿತೀಯ ಪಿಯುಸಿಯ ಇಂಗ್ಲೀಷ್​​ ಪರೀಕ್ಷೆ ಮುಂದೂಡಿಕೆಯಾಗಿತ್ತು. ಬಾಕಿ ಇರುವ ಇಂಗ್ಲೀಷ್ ಪರೀಕ್ಷೆ ಬರೆಯಲಾಗದ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಗಳ ಆತಂಕ ದೂರವಾಗುವ ಲಕ್ಷಣಗಳು ಗೋಚರಿಸುತ್ತಿವೆ.  ಪರೀಕ್ಷೆ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದು, ಸದ್ಯದಲ್ಲೇ ಪರೀಕ್ಷೆಗೆ ದಿನಾಂಕ ಪ್ರಕಟ ಮಾಡುವ ಸಾಧ್ಯತೆಯಿದೆ.

ಲಾಕ್​ಡೌನ್​ನಿಂದ ಹಾಸ್ಟೆಲ್​ನಲ್ಲಿ ವಾಸವಿದ್ದ ವಿದ್ಯಾರ್ಥಿಗಳು ಹಾಗೂ ತಮ್ಮ ಊರುಗಳಿಗೆ ತೆರಳಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಪರೀಕ್ಷೆ  ಬರೆಯಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ತಮ್ಮ ಊರುಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಇ-ಮೇಲ್ ಮೂಲಕ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ತಿಳಿಸಬೇಕು  [email protected] ಗೆ ಮೇಲ್ ಮಾಡಬೇಕು. ಕಾಲೇಜಿನ ಸಂಖ್ಯೆ, ವಿದ್ಯಾರ್ಥಿಯ ಹೆಸರು, ದ್ವಿತೀಯ ಪಿಯು ರಿಜಿಸ್ಟ್ರಾರ್ ನಂ, ಮೊಬೈಲ್ ನಂ, ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಹೆಸರು, ಪ್ರಸ್ತುತ ಪರೀಕ್ಷಾ ಕೇಂದ್ರದ ಕೋಡ್ ಮಾಹಿತಿ ನೀಡಬೇಕು.

ಈಗಾಗಲೇ ಪರೀಕ್ಷೆ ಬರೆದ ಪರೀಕ್ಷಾ ಕೇಂದ್ರ ಹೊರತುಪಡಿಸಿ ಪ್ರಸ್ತುತ ವಾಸವಿರುವ ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಇಚ್ವಿಸಿದ್ದಲ್ಲಿ ವಿದ್ಯಾರ್ಥಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಆದೇಶ ಪ್ರಕಟಿಸಿದೆ.

source: FIRST NEWS.COM

error: