
ಬೆಂಗಳೂರು: ರಾಜ್ಯದಲ್ಲಿ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ ಎರಡು ಸಾವಿರ ದಾಟಿದೆ. ಇಂದು ಮತ್ತೆ 97 ಹೊಸ ಕೋವಿಡ್-19 ಸೋಂಕು ಪ್ರಕರಣ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 2056ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ 1959 ಇದ್ದ ಸೋಂಕಿನ ಸಂಖ್ಯೆ ಇಂದಿನ ಹೊಸ ಪ್ರಕರಣಗಳ ಕಾರಣದಿಂದ 2056ಕ್ಕೆ ಏರಿಕೆಯಾಗಿದೆ. ಇದುವರೆಗೆ ರಾಜ್ಯದಲ್ಲಿ634 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 42 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣಹೊಂದಿದ್ದಾರೆ.
ಇಂದು ಚಿಕ್ಕಬಳ್ಳಾಪುರದಲ್ಲಿ 26 ಪ್ರಕರಣ, ಉಡುಪಿಯಲ್ಲಿ 18, ಹಾಸನದಲ್ಲಿ 14 ಪ್ರಕರಣ, ಯಾದಗಿರಿ ಮತ್ತು ಕಲಬುರಗಿಯಲ್ಲಿ ತಲಾ ಆರು ಪ್ರಕರಣ, ದಾವಣಗೆರೆಯಲ್ಲಿ ನಾಲ್ಕು, ದಕ್ಷಿಣ ಕನ್ನಡದಲ್ಲಿ ಒಂದು, ಉತ್ತರ ಕನ್ನಡದಲ್ಲಿ ಎರಡು ಪ್ರಕರಣ, ಮಂಡ್ಯದಲ್ಲಿ 15 ಪ್ರಕರಣಗಳು,ಯಾದಗಿರಿಯಲ್ಲಿ ಐದು ಪ್ರಕರಣ, ತುಮಕೂರು ಎರಡು, ವಿಜಯಪುರ, ಕೊಡಗಿನಲ್ಲಿ ತಲಾ ಒಂದು ಪ್ರಕರಣ ದೃಢವಾಗಿದೆ
More Stories
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಮುಖಂಡರಿoದ ಪಟಾಕಿ ಸಿಡಿಸಿ ಸಿಹಿ ವಿತರಣೆ
ಪ್ರಜ್ಞಾವಂತರ ವೇದಿಕೆ ಶ್ರೀರಂಗಪಟ್ಟಣ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ