April 19, 2024

Bhavana Tv

Its Your Channel

ಉನ್ನತ ಶಿಕ್ಷಣ ಇಲಾಖೆಯಿಂದ ಲ್ಯಾಪ್‌ಟಾಪ್ ಪಡೆದಿರುವ 1.10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಇಂಟರ್‌ನೆಟ್‌ ಸೇವೆ ?-ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಿಂದ ಲ್ಯಾಪ್‌ಟಾಪ್ ಪಡೆದಿರುವ 1.10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಇಂಟರ್‌ನೆಟ್‌ ಸೇವೆ ಒದಗಿಸುವ ಸಂಬಂಧ ಈ ಸೇವೆ ಒದಗಿಸುವ ಕಂಪನಿಗಳ ಜತೆ ಮಾತುಕತೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ನಗರದಲ್ಲಿ ಮಂಗಳವಾರ ಇಂಟರ್‌ನೆಟ್‌ ಪೂರೈಕೆದಾರ ಸಂಸ್ಥೆಗಳ ಪ್ರತಿನಿಧಿಗಳ ಜತೆ ವಿಡಿಯೊ ಸಂವಾದ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಲ್ಯಾಪ್‌ಟಾಪ್‌ ಕೊಟ್ಟ ನಂತರ ಅವುಗಳ ಸದುಪಯೋಗ ಸರಿಯಾಗಿ ಆಗುತ್ತಿಲ್ಲ. ಈ ಕಾರಣಕ್ಕೆ ಇಂಟರ್‌ನೆಟ್‌ ಸೇವೆ ಒದಗಿಸುವಂತೆ ಕೋರಲಾಗಿದೆ. ಇದಕ್ಕೆ ಕಂಪನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯ ಮಾಹಿತಿ ಒದಗಿಸುವಂತೆ ಕೋರಿವೆ. ಇದರ ನಡುವೆ ಆನ್‌ಲೈನ್‌ ಕಂಟೆಂಟ್‌ ಕೂಡ ಒದಗಿಸುವ ಕೆಲಸ ಇಲಾಖೆಯಿಂದ ಆಗುತ್ತಿದೆ’ ಎಂದು ವಿವರಿಸಿದರು.

‘ಲ್ಯಾಪ್ ಟಾಪ್ ಇಲ್ಲದವರಿಗೆ ಆನ್ ಲೈನ್ ಶಿಕ್ಷಣ ಪಡೆಯಲು ತೊಂದರೆಯಾಗುತ್ತಿದೆಯಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯ ಲ್ಯಾಪ್ ಟಾಪ್ ಹೊಂದಿರುವವರು ಅದನ್ನು ಸದ್ಬಳಕೆ ಮಾಡಿಕೊಳ್ಳಲು ಬೇಕಾದ ಸೌಲಭ್ಯ ಒದಗಿಸುವುದು ನಮ್ಮ ಗುರಿ. ಲ್ಯಾಪ್ ಟಾಪ್ ಇಲ್ಲದೇ ಇರುವವರಿಗೆ ಏನು ಎಂಬುದನ್ನು ಮುಂದೆ ತೀರ್ಮಾನ ಮಾಡಲಾಗುವುದು,’ ಎಂದು ಹೇಳಿದರು.

error: