March 28, 2025

Bhavana Tv

Its Your Channel

ನಟ ಚಿರಂಜಿವಿ ಸರ್ಜಾ ಇನ್ನಿಲ್ಲ : ಹೃದಯಾಘಾತದಿಂದ ಸಾವು

ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ (39 ವರ್ಷ) ಇಹಲೋಕವನ್ನು ತ್ಯೆಜಿಸಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕಳೆದೆರಡು ದಿನಗಳಿಂದಲೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚಿರಂಜೀವಿ ಸರ್ಜಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಇಂದು ಮಧ್ಯಾಹ್ನ 3.30ರ ಸುಮಾರಿಗೆ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಕನ್ನಡ ಖ್ಯಾತ ನಟರಾಗಿರುವ ಚಿರಂಜೀವಿ ಸರ್ಜಾ ವಾಯುಪುತ್ರ, ಗಂಡೆದೆ, ಚಿರು, ದಂಡಂ ದಶಗುಣಂ, ವರದನಾಯಕ, ಕೆಂಪೇಗೌಡ, ಚಂದ್ರಲೇಖ, ಅಜಿತ್, ರುದ್ರತಾಂಡವ, ಆಟಗಾರ, ರಾಮಲೀಲಾ, ಭರ್ಜರಿ, ಅಮ್ಮ ಐ ಲವ್ ಯು ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ

error: