
ಮೈಸೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ. ಲಾಕ್ ಡೌನ್ ವಿಸ್ತರಣೆ ಮಾಡಿರುವ ಕಾರಣ ಕೆ-ಸೆಟ್ ಪರೀಕ್ಷೆಯನ್ನು ಮುಂದೂಡಿಕೆ ಮಾಡಲು ನಿರ್ಧರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ http://kset.uni-mysore.ac.in/ ಗೆ ಭೇಟಿ ನೀಡಿ.ಲಾಕ್ ಡೌನ್ ಹಿನ್ನೆಲೆಯಲ್ಲಿ ಕೆ-ಸೆಟ್ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಜೂನ್ 21 ರಂದು ಪರೀಕ್ಷೆ ನಡೆಯಲಿದೆ ಎಂದು ಸಂಯೋಜನಾಧಿಕಾರಿ ಪ್ರೊ.ಎಚ್. ರಾಜಶೇಖರ್ ಈ ಹಿಂದೆ ತಿಳಿಸಿದ್ದರು, ಈಗ ಮತ್ತೆ ಕೆ-ಸೆಟ್ ಪರೀಕ್ಷೆಯನ್ನು ಮುಂದೂಡಲಾಗಿದ್ದು ಶೀಘ್ರದಲ್ಲಿ ಈ ಬಗ್ಗೆ ಮೈಸೂರು ವಿವಿಯಿಂದ ಅಧಿಸೂಚನೆ ಹೊರಬೀಳಲಿದೆ

Source: Kannada news
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ