
ಬೆಂಗಳೂರು: ಕೋವಿಡ್-19 ಸೋಂಕಿನ ಕಳವಳ ರಾಜ್ಯದಲ್ಲಿ ಮುಂದುವರಿದಿದೆ, ಇಂದು 120 ಜನರಿಗೆ ಸೋಂಕು ದೃಢವಾಗಿದ್ದು, ಕೋವಿಡ್ ಸೋಂಕಿತರ ಸಂಖ್ಯೆ ಆರು ಸಾವಿರ ದಾಟಿದೆ.ರಾಜ್ಯದಲ್ಲಿ ಇಂದಿನ ಸೋಂಕಿತರ ಕಾರಣದಿಂದ ಒಟ್ಟು ಸೋಂಕಿತರ ಸಂಖ್ಯೆ 6041 ಕ್ಕೆ ಏರಿಕೆ ಕಂಡಿದೆ. ಈ ಮೂಲಕ ಆರು ಸಾವಿರಕ್ಕಿಂತ ಹೆಚ್ಚು ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟ ದೇಶದ ಹತ್ತನೇ ರಾಜ್ಯವಾಗಿದೆ
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಬೆಂಗಳೂರು ನಗರ – 42, ಯಾದಗಿರಿ – 27, ವಿಜಯಪುರ – 13, ಕಲಬುರ್ಗಿ -11, ಬೀದರ್ -05, ದಕ್ಷಿಣ ಕನ್ನಡ -04, ಧಾರವಾಡ -04, ದಾವಣಗೆರೆ -03, ಹಾಸನ -03, ಬಳ್ಳಾರಿ – 03, ಬಾಗಲಕೋಟೆ, ರಾಮನಗರ ತಲಾ ಎರಡು, ಬೆಳಗಾವಿ – 01 ಕೊರೋನಾ ಕೇಸ್ ಪತ್ತೆಯಾಗುವ ಮೂಲಕ ಇಂದು 120 ಜನರಿಗೆ ಕೊರೋನಾ ದೃಢಪಟ್ಟಿದೆ. ಅಲ್ಲದೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6041ಕ್ಕೆ ಏರಿಕೆಯಾದ್ರೇ, 2862 ಜನ ಕೊರೋನಾ ಸೋಂಕಿತರು ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿತ ಸಕ್ರೀಯ ಜನರ ಸಂಖ್ಯೆ 3108 ಆಗಿದೆ. ರಾಜ್ಯದಲ್ಲಿ ಇಂದು ಮೂವರು ಕೊರೋನಾಗೆ ಬಲಿಯಾಗುವ ಮೂಲಕ ಸಾವಿನ ಸಂಖ್ಯೆ 69ಕ್ಕೆ ಏರಿಕೆಯಾಗಿದೆ.
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ