
ಬೆಂಗಳೂರು : ಕೊರೊನಾ ಮಹಾಮಾರಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಭರ್ಜರಿ ಶಾಕ್ ಕೊಟ್ಟಿದೆ. ಬೆಳ್ಳಂಬೆಳಗ್ಗೆಯೇ ಕೊರೊನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ಸಿಲಿಕಾನ್ ಸಿಟಿಯಲ್ಲಿ ಬಲಿಯಾದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಮೃತಪಟ್ಟ ನಾಲ್ವರ ಪೈಕಿ ಇಬ್ಬರನ್ನು ರಾಜೀವಗಾಂಧಿ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ರೆ, ಇನ್ನಿಬ್ಬರನ್ನು ಬೌರಿಂಗ್ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ರೋಗಿ ಸಂಖ್ಯೆ 4079, ರೋಗಿ ಸಂಖ್ಯೆ 4845, ರೋಗಿ ಸಂಖ್ಯೆ 5340 ಹಾಗೂ ರೋಗಿ ಸಂಖ್ಯೆ 5336 ಎಂದು ತಿಳಿದು ಬಂದಿದೆ.
ಹಲವು ದಿನಗಳಿಂದಲೂ ಗಂಭೀರ ಸ್ಥಿತಿಯಲ್ಲಿದ್ದ ನಾಲ್ವರನ್ನೂ ಕೂಡ ವೆಂಟಿಲೇಟರ್ ನಲ್ಲಿಟ್ಟು ಚಿಕಿತ್ಸೆಯನ್ನು ಕೊಡಿಸಲಾಗುತ್ತಿತ್ತು. ಆದ್ರೀಗ ಚಿಕಿತ್ಸೆ ಫಲಕಾರಿಯಾದೇ ನಾಲ್ವರು ಕೂಡ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರೋ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಒಂದೇ ದಿನ ನಾಲ್ವರು ಸಾವನ್ನಪ್ಪಿರುವುದು ಆತಂಕವನ್ನು ಮೂಡಿಸಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ.
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ