
ಬೆಂಗಳೂರು; ಗ್ರಾಮ ಪಂಚಾಯತಿಗಳಿಗೆ ಶೀಘ್ರ ಚುನಾವಣೆ ನಡೆಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಚುನಾವಣೆ ನಡೆಯುವವರೆಗೆ ಪ್ರತಿಯೊಂದು ಗ್ರಾಮ ಪಂಚಾಯತಿಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗುವುದು ಎಂದು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಜೆ. ಮಾಧುಸ್ವಾಮಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಗ್ರಾಮ ಚಂಚಾಯಿತಿಗಳಿಗೆ ಈಗಾಗಲೇ ಚುನಾವಣೆ ನಡೆಯಬೇಕಿತ್ತು. ಆದರೆ, ಸರ್ಕಾರ ಈ ವರೆಗೆ ಚುನಾವಣೆ ನಡೆಸಲು ಮುಂದಾಗಿಲ್ಲ. ಹೀಗಾಗಿ ವಿರೋಧ ಪಕ್ಷಗಳು ಕಳೆದ ಹಲವು ದಿನಗಳಿಂದ ಚುನಾವಣೆಗೆ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಸಚಿವ ಮಾಧುಸ್ವಾಮಿ,
“ರಾಜ್ಯದಲ್ಲಿ ಅವಧಿ ಮೀರಿರುವ ಎಲ್ಲಾ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನೂ ಶೀಘ್ರದಲ್ಲಿ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಹೀಗಾಗಿ ಶೀಘ್ರದಲ್ಲಿ ಚುನಾವಣೆ ನಡೆಯಲಿದೆ. ಆದರೆ, ಚುನಾವಣೆ ನಡೆಯುವವರೆಗೆ ಜಿಲ್ಲಾಧಿಕಾರಿ ಮಟ್ಟದಲ್ಲಿ ಪ್ರತಿಯೊಂದು ಪಂಚಾಯತಿಗಳಿಗೂ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಈ ಕುರಿತು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಅಲ್ಲದೆ, ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ