June 2, 2024

Bhavana Tv

Its Your Channel

ಸ್ತ್ರೀ ಶಕ್ತಿ ಸದಸ್ಯರ ಮಾದರಿಯಲ್ಲಿ ಶೂನ್ಯ ಬಡ್ಡಿ ಸಾಲ, ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ.

ಹಾವೇರಿ :ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯವಾಗಿದೆ. ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸಮಾಡುತ್ತಿದ್ದಾರೆ. ಇವರ ಸೇವೆಯನ್ನು ಮನ್ನಿಸಿ ಸಹಕಾರಿ ಇಲಾಖೆಯಿಂದ ರಾಜ್ಯದ ಎಲ್ಲ 41,500 ಆಶಾ ಕಾರ್ಯಕರ್ತೆಯರಿಗೆ ತಲಾ ಮೂರು ಸಾವಿರ ರೂ. ನಂತೆ 12 ಕೋಟಿ 7.5 ಲಕ್ಷ ರೂ. ಪ್ರೋತ್ಸಾಧನ ನೀಡಲು ಉದ್ದೇಶಿಸಲಾಗಿದೆ. ಈಗಾಗಲೇ 18 ಜಿಲ್ಲೆಯ 14 ಸಾವಿರ ಆಶಾ ಕಾರ್ಯಕರ್ತೆಯರಿಗೆ 4 ಕೋಟಿ ರೂ.ಗೂ ಹೆಚ್ಚು ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಆಶಾ ಕಾರ್ಯಕರ್ತರಿಗೆ ಆಥಿಕ ಬಲ ನೀಡುವ ನಿಟ್ಟಿನಲ್ಲಿ ಮುಂದಿನ ದಿನದಲ್ಲಿ ಸ್ತ್ರೀ ಶಕ್ತಿ ಗುಂಪುಗಳ ಮಾದರಿಯಲ್ಲಿ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರದೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು. ಸ್ತ್ರೀ ಶಕ್ತಿ ಗುಂಪುಗಳ ರೀತಿಯಲ್ಲಿ ಆಶಾ ಕಾರ್ಯಕರ್ತೆಯರು ಸ್ವಯ ಸಹಾಯ ಗುಂಪುಗಳನ್ನು ರಚಿಸಿಕೊಂಡರೆ ಅವರಿಗೆ ಆರ್ಥಿಕ ನೆರವು ನೀಡಿ ಶಕ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಗೃಹ ಸಚಿವರಾಗಿ ಬಸವರಾಜ ಬೊಮ್ಮಾಯಿ ಅವರ ಕಾರ್ಯ ನಿರ್ವಹಣೆ ಕುರಿತಂತೆ ಮೆಚ್ಚುಗೆ ವ್ಯಕ್ತಪಡಿಸಿದ ಸಹಕಾರ ಸಚಿವರು ಕೋವಿಡ್ ನಿಯಂತ್ರಣದಲ್ಲಿ ಗೃಹ ಇಲಾಖೆಯು ಸಮರ್ಥವಾಗಿ ನಿಭಾಯಿಸಿದೆ. ಪಾದರಾಯನಪುರ ಘಟನೆ, ಲಾಕ್‍ಡೌನ್ ಸಂದರ್ಭದ, ಮೈಸೂರಿನಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಸಂದರ್ಭಗಳು, ರಾಜ್ಯದ ಹಲವೆಡೆ ಕೊರೊನಾ ವಾರಿಯರ್ ಮೇಲೆ ನಡೆದ ಹಲ್ಲೆಗಳು ಸೇರಿದಂತೆ, ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಕೋವಿಡ್ ಸಂದರ್ಭದಲ್ಲಿ ರೈತರ ಉತ್ಪನ್ನಗಳ ಮಾರಾಟಕ್ಕೆ ವ್ಯವಸ್ಥೆ ಸೇರಿದಂತೆ ಯಾವುದೇ ತೊಂದರೆಯಾಗದಂತೆ ಗೃಹ ಇಲಾಖೆ ನಿರ್ವಹಣೆ ಅತ್ಯಂತ ಶ್ಲಾಘನೀಯವಾದದ್ದು. ಇದಕ್ಕೆ ರಾಜ್ಯದಲ್ಲಿ ಸಮರ್ಥ ಗೃಹ ಸಚಿವರ ನೇತೃತ್ವ ಕಾರಣ ಎಂದು ಬಣ್ಣಿಸಿದರು. ಇದೇ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ ಅವರ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ನೂರು ದಿನದಲ್ಲಿ 30 ಜಿಲ್ಲೆಗಳ ಪ್ರವಾಸಕೈಗೊಂಡು ರೈತರ ಸಮಸ್ಯೆಗಳಿಗೆ ಸಮರ್ಥವಾಗಿ ಸ್ಪಂಧಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಗೆ ಮೂರು ಸಾವಿರ ರೂ. ಪ್ರೋತ್ಸಾಹಧನ ಚೆಕ್ ನೀಡಿ ಅಭಿನಂದಿಸಲಾಯಿತು.

ಹಾವೇರಿ ಜಿಲ್ಲೆಗೆ ನೂರಕ್ಕೆ ನೂರರಷ್ಟು ಮೇಘಾಡೈರಿ ಸ್ಥಾಪನೆ ಮಾಡಲಾಗುವುದು. ಪ್ರತ್ಯೇಕ ಡಿಸಿಸಿ ಬ್ಯಾಂಕ್ ಕೆ.ಎಂ.ಎಫ್ ಕುರಿತಂತೆ ಈಗಾಗಲೇ ಹಲವು ಸಭೆಗಳನ್ನು ನಡೆಸಲಾಗಿದ್ದು, ಸಚಿವ ಸಂಪುಟದಲ್ಲಿ ಚರ್ಚಿ ಕ್ರಮಕೈಗೊಳ್ಳಲಾಗುವುದು ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹಧನ ಚೆಕ್ ವಿತರಿಸಿ ಅವರು ಮಾತನಾಡಿದರು.

ಧಾರವಾಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಡಿಸಿಸಿ ಬ್ಯಾಂಕ್) ಪ್ರತ್ಯೇಕಿಸಿ ಹಾವೇರಿಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಹಾಗೂ ಹಾಲು ಒಕ್ಕೂಟ ಸ್ಥಾಪಿಸುವ ಕುರಿತಂತೆ ಈಗಾಗಲೇ ಎರಡು ಸಭೆಗಳನ್ನು ನಡೆಸಲಾಗಿದೆ. ನಭಾರ್ಡ್ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ. ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆಗೆ ಹಣಕಾಸು ವ್ಯವಸ್ಥೆ, ಜಮೀನಿನ ಲಭ್ಯತೆ ಸೇರಿದಂತೆ ಮೂರ್ನಾಲ್ಕು ಸಲಹೆಗಳನ್ನು ಕೇಳಿದ್ದಾರೆ. ಇದೇ ಜುಲೈ 2 ರಂದು ಮತ್ತೊಂದು ಸಭೆಯನ್ನು ನಡೆಸಲಾಗುವುದು. ಸಭೆಯಲ್ಲಿ ಅಂತಿಮ ನಿರ್ಣಯಕೈಗೊಂಡು ಸಚಿವ ಸಂಪುಟದ ಸಭೆಯ ಮುಂದೆ ತಂದು ಬ್ಯಾಂಕ್ ಸ್ಥಾಪನೆ ಕುರಿತಂತೆ ಅಂತಿಮ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಹಾವೇರಿ ಜಿಲ್ಲೆಗೆ ಮೇಘಾಡೈರಿಯನ್ನು ನೂರಕ್ಕೆ ನೂರರಷ್ಟು ಸ್ಥಾಪಿಸಲಾಗುವುದು. ಮೇಘಾಡೈರಿಯ ಪ್ರಸ್ತಾವನೆಯನ್ನು ಗೃಹ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಪ್ರಸ್ತಾಪ ಮಾಡಿದ್ದಾರೆ ಹಾಗೂ ಡಿಸಿಸಿ ಬ್ಯಾಂಕ್ ಕೆ.ಎಂ.ಎಫ್ ಸ್ಥಾಪನೆಗೆ ಬೇಡಿಕೆ ಸಲ್ಲಿಸಿದ್ದಾರೆ. ಗೃಹ ಸಚಿವರ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಸಮಾರಂಭದ ಗೃಹ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದರು. ಅಧ್ಯಕ್ಷತೆಯನ್ನು ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ ವಹಿಸಿದ್ದರು. ಕೃಷಿ ಸಚಿವರಾದ ಬಿ.ಸಿ.ಪಾಟೀಲ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಯು.ಬಿ.ಬಣಕಾರ, ಜಿ.ಪಂ.ಅಧ್ಯಕ್ಷ ಬಸವನಗೌಡ ದೇಸಾಯಿ, ಶಾಸಕರಾದ ನೆಹರು ಓಲೇಕಾರ, ಅರುಣಕುಮಾರ ಗುತ್ತೂರ, ಜಿಲ್ಲಾ ಪಂಚಾಯತ್ ಸದಸ್ಯ ವಿರುಪಾಕ್ಷಪ್ಪ ಕಡ್ಲಿ, ತಾ.ಪಂ.ಅಧ್ಯಕ್ಷೆ ಕಮಲವ್ವ ಹೇಮನಗೌಡ, ತಾ.ಪಂ.ಸದಸ್ಯ ಸತೀಶ ಸಂದಿಮನಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರತ್ನವ್ವ ಪುರದ, ಕರ್ನಾಟಕ ಸೆಂಟ್ರಲ್ ಕೋ.ಆಪ್ ಬ್ಯಾಂಕಿನ ಅಧ್ಯಕ್ಷರಾದ ಬಾಪುಗೌಡ ಪಾಟೀಲ, ಕೆ.ಮುನಿಯಪ್ಪ, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಮೇಶ ದೇಸಾಯಿ, ಸಹಕಾರಿ ಸಂಘಗಳ ಸಂಯುಕ್ತ ಉಪನಿಬಂಧಕ ಜಿ.ಎಂ.ಪಾಟೀಲ ಇತರರು ಉಪಸ್ಥಿತರಿದ್ದರು.

source : Kannada News Now

error: