
ಕಲಬುರ್ಗ:ಹಿರಿಯ ಕನ್ನಡ ಸಾಹಿತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಮೊದಲ ಮಹಿಳೆ ಗೀತಾ ನಾಗಭೂಷಣ್ ಇಂದು ಭಾನುವಾರ ವಿಧಿವಶರಾದರು. 78 ವರ್ಷದ ಗೀತಾ ನಾಗಭೂಷಣ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಕಲಬುರ್ಗಿಯ ಸ್ವಸ್ತಿಕ ನಗರದಲ್ಲಿ ವಾಸವಿದ್ದ ಅವರಿಗೆ ಭಾನುವಾರ ಸಂಜೆ ಎದೆ ನೋವು ಕಾಣಿಸಿಕೊಂಡಿತ್ತು. ತತ್ಕ್ಷಣವೇ ಅವರನ್ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದರು.
1942, ಮಾರ್ಚ್ 25ರಂದು ಕಲಬುರ್ಗಿಯ ಸಾವಳಗಿ ಗ್ರಾಮದಲ್ಲಿ ಜನಸಿದ ಗೀತಾ ನಾಗಭೂಷಣ್ ಅವರು 27 ಕಾದಂಬರಿಗಳನ್ನ ಬರೆದಿದ್ದಾರೆ. ಅವರ ‘ಬದುಕು’ ಕಾದಂಬರಿಗೆ ಕೇಂದ್ರ ಸಾಹಿತಿ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 50 ಸಣ್ಣ ಕಥೆಗಳು ಮತ್ತು 12 ನಾಟಕ ಕೃತಿಗಳನ್ನೂ ಅವರು ರಚಿಸಿದ್ದಾರೆ. ಗೀತಾ ಅವರ ಹೆಸರಲ್ಲಿ ಅನೇಕ ಮೊದಲುಗಳ ದಾಖಲೆಗಳು ಸೃಷ್ಟಿಯಾಗಿವೆ. ಕೇಂದ್ರ ಸಾಹಿತಿ ಅಕಾಡೆಮಿ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಅವರಾಗಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಸಾಹಿತಿಯೂ ಹೌದು. ನಾಡೋಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ ಎಂಬ ದಾಖಲೆಯೂ ಇದೆ. ಭಾರತೀಯ ಭಾಷಾ ಪರಿಷತ್ನ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿಯೂ ಅವರು. ಮನಸ್ಸಿಗೆ ಬಂದಲ್ಲಿ ಕೊರೋನಾ ಚಿಕಿತ್ಸೆ ನೀಡಲು ಜನ ಜಾನುವಾರುಗಳಲ್ಲ ; ಹೆಚ್.ಕೆ.ಪಾಟೀಲ್ ಗುಡುಗು
ಗದಗ್ನಲ್ಲಿ 2010ರಲ್ಲಿ ನಡೆದ 76ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ ಗೌರವವೂ ಅವರಿಗೆ ಸಿಕ್ಕಿದೆ. ಗುಲ್ಬರ್ಗ ವಿಶ್ವವಿದ್ಯಾಲಯದ ಡಾಕ್ಟರೇಟ್ ಪದವಿ, ಅತ್ತಿಮಬ್ಬೆ ಪ್ರಶಸ್ತಿ ಹೀಗೆ ಅನೇಕ ಸಾಧನೆ ಮತ್ತು ಗೌರವಗಳು ಗೀತಾ ನಾಗಭೂಷಣ್ ಅವರಿಗೆ ಸಿಕ್ಕಿದೆ. ಸಾಹಿತಿ ಗೀತಾ ನಾಗಭೂಷಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ