May 19, 2024

Bhavana Tv

Its Your Channel

ಬೆಳ್ಳಿಗದೆ,ಕೀರಿಟ ನೀಡಿದ ಪ್ರಕರಣ; ಉಡುಪಿ ಡಿಸಿ ಜಗದೀಶ್ ಸೇರಿದಂತೆ ೯ ಮಂದಿ ಪಿಡಿಒಗಳ ಮೇಲೆ ಕೇಸು ದಾಖಲು.

ಕೋಲಾರ : ಕೋಲಾರ ಜಿಲ್ಲೆಯ ನಿರ್ಗಮಿತ ಜಿಪಂ ಸಿಇಒ,ಹಾಲಿ ಉಡುಪಿಯ ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಬೆಳ್ಳಿಗದೆ,ಕಿರೀಟ ಹಾಗೂ ಚಿನ್ನದ ಉಂಗುರ ನೀಡಿ ಬೀಳ್ಕೊಟ್ಟ ಪ್ರಕರಣದಲ್ಲಿ ಜಗದೀಶ್ ಸೇರಿದಂತೆ ತಾಪಂ ಇಒ ಮತ್ತು ೯ ಮಂದಿ ಗ್ರಾಪಂ ಪಿಡಿಒಗಳ ಮೇಲೆ ಎಫ್ಐಆರ್ ದಾಖಲಾಗಿದೆ.

ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ೨೦೧೯,ಅಗಸ್ಟ್ ೨೩ ರಂದು ನಡೆದ ಕಾರ್ಯಕ್ರಮಕ್ಕೆ ಸಂಬOಧಪಟ್ಟOತೆ ಕೋಲಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ ೧೯೮೮ರ ಅನ್ವಯ ತನಿಖೆ ನಡೆಸಿ ವರದಿ ನೀಡುವಂತೆ ಕೋಲಾರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಆದೇಶ ನೀಡಿದೆ ಎನ್ನಲಾಗಿದೆ.

ಈ ಘಟನೆಗೆ ಸಂಬoಧಿಸಿದOತೆ ಕೋಲಾರದ ನಿವಾಸಿ ಎಸ್.ನಾರಾಯಣ ಸ್ವಾಮಿಯವರು ಭ್ರಷ್ಟಾಚಾರ ನಿಗ್ರಹ ದಳದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದರು. ಅಕ್ರಮ ಸಂಭಾವನೆ ಮೂಲಕ ನಿರ್ಗಮಿತ ಅಧಿಕಾರಿಗೆ ಬೀಳ್ಕೊಡುಗೆ ನಡೆಸಲಾಗಿದೆ ಎಂದು ಆರೋಪಿಸಿದ್ದರು ಎನ್ನಲಾಗಿದೆ.

ಜಿಪಂ ಸಿಇಒ ಜಗದೀಶ್,ಪಿಡಿಒಗಳಾದ ಕೆ.ಮಹೇಶ್ ಕುಮಾರ್, ಪಿ,ನಾರಯಣಪ್ಪ,ಎಂ.ರಾಮಕೃಷ್ಣ, ವಿ.ಶಂಕರ್, ಎನ್.ಸಂಪರಾಜ್,ಎಸ್.ಜಿ.ಹರೀಶ್ ಕುಮಾರ್, ಎಂ.ಸೋಮಶೇಖರ್, ಅಶ್ವತ್ಥ ನಾರಾಯಣ, ಎಂ.ಸುರೇಶ್ ಕುಮಾರ್ ಹಾಗೂ ಶ್ರೀನಿವಾಸಪುರದ ತಾಪಂ ಇಒ ಆನಂದ್ ವಿರುದ್ಧ ಕೇಸು ದಾಖಲಾಗಿದೆ ಎಂದು ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ಭಾಗವಹಿಸಿದ್ದ ನಿರ್ಗಮಿತ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸೇರಿದಂತೆ ಒಟ್ಟು ಆರು ಮಂದಿ ಅಧಿಕಾರಿಗಳನ್ನು ಸಾಕ್ಷಿ ಮಾಡಲಾಗಿದೆ.

ಈ ಪ್ರಕರಣದ ಕುರಿತು ತನಿಖೆ ನಡೆಸಿ ೨೫ ಆಗಸ್ಟ್ ೨೦೨೦ ರೊಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ನ್ಯಾಯಾಧೀಶರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಆದೇಶ ನೀಡಿದ್ದಾರೆ ಎನ್ನಲಾಗಿದೆ

error: