
ಬೆಂಗಳೂರು : ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆ ಡಿಪ್ಲೋಮಾ ಪರೀಕ್ಷೆಯನ್ನು ಮುಂದೂಡಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ತಾಂತ್ರಿಕ ಇಲಾಖೆ ಆದೇಶ ಹೊರಡಿಸಿದೆ.
ಜುಲೈ 15 ರಿಂದ ನಿಗದಿಯಾಗಿದ್ದ ಡಿಪ್ಲೋಮಾ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದ್ದು, ಶೀಘ್ರದಲ್ಲೇ ಪರೀಕ್ಷೆ ದಿನಾಂಕವನ್ನು ಪ್ರಕಟಿಸುವುದಾಗಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ತಾಂತ್ರಿಕ ಇಲಾಖೆ ಆದೇಶ ಹೊರಡಿಸಿದೆ.
ಕೊರೊನಾ ಕೇಸ್ ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಕೊರೊನಾ ಆತಂಕದದಲ್ಲಿದ್ದ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಜುಲೈ 15 ರಿಂದ ಪರೀಕ್ಷೆ ಆರಂಭವಾಗಬೇಕಿತ್ತು, ಆದರೆ ರಾಜ್ಯದಲ್ಲಿ ಕೊರೊನಾ ಆತಂಕ ಮನೆ ಮಾಡಿದ್ದು, ಪದವಿ, ಡಿಪ್ಲೋಮಾ ಪರೀಕ್ಷೆಗಳು ಬಾಕಿ ಉಳಿದಿದೆ.
source ; kannada news now
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ