April 29, 2024

Bhavana Tv

Its Your Channel

ಕರ್ನಾಟಕದಲ್ಲಿ ಒಂದೇ ದಿನ 1843 ಜನರಿಗೆ ಕೊರೋನಾ ಸೋಂಕು, 30 ಸಾವು; ಬೆಂಗಳೂರಿನಲ್ಲಿ ಭಯದ ವಾತಾವರಣ

ಬೆಂಗಳೂರು : ರಾಜ್ಯದಲ್ಲಿ ಸೋಮವಾರ ಕೂಡ ಕೊರೋನಾ ಸೋಂಕಿತರ ಸಂಖ್ಯೆ ಸರಣಿ ಮುಂದುವರೆದಿದೆ. ರಾಜ್ಯದಲ್ಲಿ ಸೋಮವಾರ 1843 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 25317ಕ್ಕೆ ಏರಿಕೆಯಾಗಿದೆ. ಇವರಲ್ಲಿ 10527 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯವಾಗಿರುವ ಕೊರೋನಾ ಸೋಂಕಿತರ ಸಂಖ್ಯೆ 14385 ಆಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಬೆಂಗಳೂರು ನಗರ – 981, ಬಳ್ಳಾರಿ – 99, ಉತ್ತರ ಕನ್ನಡ – 81, ಬೆಂಗಳೂರು ಗ್ರಾಮಾಂತರ – 68, ಧಾರವಾಡ – 56, ಕಲಬುರ್ಗಿ – 53, ಹಾಸನ – 49, ಮೈಸೂರು – 45, ಬೀದರ್ – 44, ಉಡುಪಿ – 40, ವಿಜಯಪುರ – 36, ಯಾದಗಿರಿ – 35, ದಕ್ಷಿಣ ಕನ್ನಡ – 34, ಬಾಲಕೋಟೆ – 33, ಶಿವಮೊಗ್ಗ – 24, ಗದಗ – 18, ಚಾಮರಾಜನಗರ – 12, ರಾಮನಗರ – 11, ಕೋಲಾರ – 10, ಹಾವೇರಿ ಮತ್ತು ಕೊಪ್ಪಳ – 09, ಚಿಕ್ಕಬಳ್ಳಾಪುರ – 07, ರಾಯಚೂರು ಮತ್ತು ಚಿತ್ರದುರ್ಗ – 06, ದಾವಣಗೆರೆ – 03, ಚಿಕ್ಕಮಗಳೂರು ಮತ್ತು ಕೊಡಗು – 02 ಕೊರೋನಾ ಕೇಸ್ ಪತ್ತೆಯಾಗುವ ಮೂಲಕ ಇಂದು 1843 ಜನರಿಗೆ ಕೊರೋನಾ ದೃಢಪಟ್ಟಿದೆ.

ಅಲ್ಲದೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 25317ಕ್ಕೆ ಏರಿಕೆಯಾದ್ರೇ, 10527 ಜನ ಕೊರೋನಾ ಸೋಂಕಿತರು ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಐಸಿಯುವಿನಲ್ಲಿ 279 ಜನರು ಚಿಕಿತ್ಸೆ ಪಡೆಯುತ್ತಿದ್ದು ರಾಜ್ಯದಲ್ಲಿ ಕೊರೋನಾ ಸೋಂಕಿತ ಸಕ್ರೀಯ ಜನರ ಸಂಖ್ಯೆ 14385 ಆಗಿದೆ. ರಾಜ್ಯದಲ್ಲಿ ಇಂದು ವಿವಿಧ ಜಿಲ್ಲೆಗಳಲ್ಲಿ ದಾಖಲೆಯ 30 ಜನರು ಸಾವನ್ನಪ್ಪುವ ಮೂಲಕ, ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ.

ಸಾರ್ವಜನಿಕರಿಗೆ ಮನವಿ: ಕೋವಿಡ್-19 ಪೀಡಿತ ದೇಶಗಳಿಂದ ಹಿಂತಿರುಗಿರುವ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಯಾರಾದರೂ ಭಾರತಕ್ಕೆ ಹಿಂತಿರುಗಿದ ದಿನದಿಂದ 14 ದಿನಗಳವರೆಗೆ, ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ಮನೆಯಲ್ಲಿ ಪ್ರತ್ಯೇಕವಾಗಿರುವುದು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳುವುದು ಅಥವಾ 14410 ಆಪ್ತಮಿತ್ರ ಆರೋಗ್ಯ ಸಹಾಯವಾಣಿ ಗೆ ಕರೆಮಾಡುವುದು. ವೈಯಕ್ತಿಕ ಸ್ವಚ್ಚತೆಯನ್ನು ಕಾಪಾಡಿಕೊಳ್ಳಿ.ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತç / ಟಿಶ್ಯೂ ಪೇಪರನ್ನು ಬಳಸಿ, ಕೈ ಸ್ವಚ್ಛಗೊಳಿಸುವ ದ್ರಾವಣ (ಸ್ಯಾನಿಟೈಸರ್) ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಿ ಮತು ್ತ ಸಾಮಾಜಿಕ ಸಮೂಹ ಗುಂಪು ಸೇರುವಿಕೆಯನ್ನು ಮಾಡಬೇಡಿ. ನಿಮ್ಮ ಆರೋಗ್ಯ ಕಾಪಾಡಿಕೊಳ್ಳಿ.

error: