May 18, 2024

Bhavana Tv

Its Your Channel

ನಗರಪಾಲಿಕೆ ಅಭಿವೃದ್ಧಿ ಅಧಿಕಾರಿ ಮನೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ, ದಾಖಲೆಗಳ ಪರಿಶೀಲನೆ

ಮೈಸೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಅಭಿವೃದ್ದಿ ಅಧಿಕಾರಿ ಉಪ ನಾಗರಾಜು ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ಬುಧವಾರ ದಾಳಿ ನಡೆಸುವ ಮೂಲಕ ಶಾಕ್ ನೀಡಿದ್ದಾರೆ.
ಇಂದು ಬೆಳಿಗ್ಗೆ ಬೆಂಗಳೂರು ಎಸಿಬಿ ಎಸ್ ಪಿ ಮಾರ್ಗದರ್ಶನದಲ್ಲಿ ರಾಮನಗರ ಡಿವೈಎಸ್ಪಿ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ನಾಗರಾಜು ಅವರ ಮೈಸೂರಿನಲ್ಲಿರುವ ಕುವೆಂಪುನಗರ ಮನೆ, ಪಾಲಿಕೆ ಕಚೇರಿ, ರಾಮನಗರದ ಸಂಬAಧಿಕರ ಮನೆ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡು ಪರಿಶೀಲನೆ ನಡೆಸಿದ್ದು, ನಾಗರಾಜು ಹೊಂದಿರುವ ಆಸ್ತಿ, ಪಾಸ್ತಿಗಳ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ

error: