May 5, 2024

Bhavana Tv

Its Your Channel

ಕೆಪಿಸಿಸಿ ವಕ್ತಾರರಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ನೇಮಕ:

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ, ರಾಜ್ಯ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.

ಕೆಪಿಸಿಸಿ ವಕ್ತಾರರಾಗಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ನೇಮಿಸಲಾಗಿದೆ. ಅನುಭವ, ತಿಳಿವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮಥ್ರ‍್ಯ ಗಮನಿಸಿ ನೇಮಕ ಮಾಡಲಾಗಿದೆ. ತಕ್ಷಣವೇ ಅಧಿಕಾರ ವಹಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಕೆಪಿಸಿಸಿ ವಕ್ತಾರೆಯನ್ನಾಗಿ ನೇಮಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.

error: