May 5, 2024

Bhavana Tv

Its Your Channel

ಶಾಲಾಕಾಲೇಜುಗಳ ಆರಂಭದ ವಿಚಾರದಲ್ಲಿ ಆತುರತೆ ಇಲ್ಲ; ತಜ್ಞರ ಸಮಿತಿ ರಚನೆ: ಬಿ. ಶ್ರೀರಾಮುಲು

ಮೈಸೂರು: ಶಾಲಾಕಾಲೇಜುಗಳ ಆರಂಭದ ವಿಚಾರದಲ್ಲಿ ಸರ್ಕಾರ ಆತುರತೆ ತೋರುವುದಿಲ್ಲ ನನಗೆ ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತ ಮುಖ್ಯವಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ರಾಜ್ಯದಲ್ಲಿ ಶಾಲಾ ಕಾಲೇಜುಗಳ ಆರಂಭಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿ ಶ್ರೀರಾಮುಲು, ಶಾಲಾಕಾಲೇಜುಗಳ ಆರಂಭದ ವಿಚಾರದಲ್ಲಿ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ. ಈ ಸಂಬಂಧ ಒಂದು ವಾರದೊಳಗೆ ವರದಿ ನೀಡುವಂತೆ ತಜ್ಞರ ಸಮಿತಿಗೆ ಸೂಚಿಸಲಾಗಿದೆ. ತಜ್ಞರ ಸಮಿತಿ ನೀಡುವ ವರದಿ ಅಧರಿಸಿ ಶಾಲಾ ಕಾಲೇಜುಗಳ ಆರಂಭದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Source:ಉದಯವಾಣಿ

error: