May 5, 2024

Bhavana Tv

Its Your Channel

ನಾಳೆಯಿಂದ ಶಬರಿಮಲೆ ಓಪನ್ : ಅಯ್ಯಪ್ಪ ಭಕ್ತರಿಗೆ ಮಹತ್ವದ ಮಾಹಿತಿ

ಶಬರಿಮಲೆ : ಧರ್ಮಶಾಸ್ತ ಶಬರಿಮಲೆಯಲ್ಲಿರುವ ಅಯ್ಯಪ್ಪನ ಸನ್ನಿಧಿ ನಾಳೆಯಿಂದ ಓಪನ್ ಆಗಲಿದೆ. 5 ದಿನಗಳ ಕಾಲ ಅಯ್ಯಪ್ಪ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹಲವು ದಿನಗಳಿಂದಲೂ ಶಬರಿಮಲೆಯಲ್ಲಿರುವ ಅಯ್ಯಪ್ಪನ ಸನ್ನಿಧಿ ಬಂದ್ ಆಗಿತ್ತು. ಆದ್ರೀಗ ತಿರುವಾಂಕೂರು ದೇವಸ್ವ ಮಂಡಳಿ ಅಯ್ಯಪ್ಪ ಸನ್ನಿಧಿ ಓಪನ್ ಮಾಡಲು ಮುಂದಾಗಿದೆ. ಕೊರೊನಾ ಸೋಂಕು ಹರಡದಂತೆ ಹಲವು ರೀತಿಯಲ್ಲಿಯೂ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಯ್ಯಪ್ಪನ ದರ್ಶನ ಪಡೆಯುವ ಭಕ್ತರು ಕಡ್ಡಾಯವಾಗಿ ಕೊರೊನಾ ನೆಗೆಟಿವ್ ವರದಿಯನ್ನು ತರುವಂತೆ ಸೂಚನೆಯನ್ನು ನೀಡಲಾಗಿದೆ.
ಐದು ದಿನ ನಡೆಯುವ ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಅಯ್ಯಪ್ಪನ ಸನ್ನಿಧಿಗೆ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಕೇರಳ ಸಶಸ್ತ್ರ ಪೊಲೀಸ್‌ ಪಡೆ (ಕೆಎಪಿ)ಯ ಐದನೇ ಬೆಟಾಲಿಯನ್‌ ಕಮಾಂಡೆಂಟ್‌ ಕೆ. ರಾಧಾಕೃಷ್ಣನ್‌ ಅವರು ಇತ್ತೀಚಿಗೆ ದೇಗುಲಕ್ಕೆ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದ್ದಾರೆ. ವಡಶ್ಶೇರಿಕ್ಕರ ಮತ್ತು ಎರುಮಲೆ ಮಾರ್ಗಗಳನ್ನು ಹೊರತುಪಡಿಸಿ ಇತರ ಎಲ್ಲಾ ಸಂಪರ್ಕಗಳನ್ನು ರದ್ದುಗೊಳಿಸಲಾಗಿದೆ.
ಕೊರೊನಾ ವೈರಸ್ ಸೋಂಕು ಹರಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ನಿತ್ಯವೂ 250 ಮಂದಿ ಭಕ್ತರಿಗೆ ಮಾತ್ರವೇ ಅಯ್ಯಪ್ಪನ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳು ನೀಲಕ್ಕಲ್ ಕ್ಯಾಂಪ್ ನಲ್ಲಿ ರ್‍ಯಾಪಿಡ್ ಕೋವಿಡ್ ಟೆಸ್ಟ್ ಗೆ ಒಳಗಾಗಬೇಕು. ಅಲ್ಲಿ ನೆಗೆಟಿವ್ ವರದಿಯಾದರೆ ಮಾತ್ರ ಮಲೆಗೆ ತೆರಳಲು ಅವಕಾಶ ಕಲ್ಪಿಸಲಾಗಿದೆ. ಆದರೆ ಪಂಪಾ ನದಿಯಲ್ಲಿ ಸ್ನಾನಕ್ಕೆ ಈ ಬಾರಿ ಅವಕಾಶ ಕಲ್ಪಿಸಲಾಗಿಲ್ಲ

error: