May 6, 2024

Bhavana Tv

Its Your Channel

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಹೋಗುವ ಭಕ್ತರಿಗೆ ಕೇರಳ ಸರ್ಕಾರದಿಂದ ಮಾರ್ಗಸೂಚಿ.

ಕೇರಳ : ಶಬರಿಮಲೈನಲ್ಲಿ ಜರುಗುವ 2020-21 ನೇ ಸಾಲಿನ ಮಂಡಲ-ಮಕರವಿಳಕ್ಕು ವರ್ಷದ ಕಾರ್ಯಕ್ರಮಕ್ಕೆ ತೆರಳುವ ಭಕ್ತಾದಿಗಳಿಗೆ, ಕೇರಳ ಸರ್ಕಾರ ವಿಶೇಷ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ.

ಪ್ರಥಮವಾಗಿ ಪ್ರತಿದಿನ 1 ಸಾವಿರ ಯಾತ್ರಾರ್ಥಿಗಳಿಗೆ ಮಾತ್ರ ಅಯ್ಯಪ್ಪನ ದರ್ಶನಕ್ಕೆ ಅವಕಾಶವಿದ್ದು, ವಾರಾಂತ್ಯದಲ್ಲಿ ಪ್ರತಿದಿನ 2 ಸಾವಿರ ಯಾತ್ರಾರ್ಥಿಗಳಿಗೆ ಅವಕಾಶ ಇರುತ್ತದೆ. ಯಾತ್ರೆಗೆ ಹೋಗುವ ಎಲ್ಲಾ ಭಕ್ತರೂ ಶಬರಿಮಲೈ ವೆಬ್‌ಸೈಟ್‌​ ಪೋರ್ಟಲ್‍ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ಅದರಂತೆ ಮೊದಲು ನೋಂದಣಿ ಮಾಡಿಕೊಂಡವರಿಗೆ ಮೊದಲ ಆದ್ಯತೆ ಇರುತ್ತದೆ.

ಇನ್ನು ಬಿಪಿಇಲ್ ಕಾರ್ಡ್, ಆಯಷ್ಮಾನ್ ಕಾರ್ಡ್ ಇತ್ಯಾದಿ ಕಾರ್ಡ್ ಹೊಂದಿರುವವರು ಯಾತ್ರೆಗೆ ತೆರಳುವ ಸಮಯದಲ್ಲಿ ಅವುಗಳನ್ನ ಹೊಂದಿರಬೇಕು ಎಂದು ಕೇರಳ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ.

Source: News First Live

error: