March 24, 2024

Bhavana Tv

Its Your Channel

ರಾಜ್ಯದಲ್ಲಿ ಜ.1ರಿಂದ 10 ಮತ್ತು 12ನೇ ತರಗತಿ ಆರಂಭ- ಸಿಎಂ ಯಡಿಯೂರಪ್ಪ

ಬೆಂಗಳೂರು : ಕೊರೋನಾ ಹಿನ್ನೆಲೆಯಲ್ಲಿ ಲಾಕ್​ಡೌನ್​ನಿಂದಾಗಿ ಮಾರ್ಚ್​ ತಿಂಗಳಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳ ಆರಂಭಕ್ಕೆ ಕರ್ನಾಟಕ ಸರ್ಕಾರ ಹಸಿರು ನಿಶಾನೆ ನೀಡಿದೆ. ಇಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜನವರಿ 1ರಿಂದ ಶಾಲೆ ಆರಂಭಕ್ಕೆ ಒಪ್ಪಿಗೆ ಸೂಚಿಸಲಾಗಿದೆ. 6ರಿಂದ ಪಿಯುಸಿ ತರಗತಿಯವರೆಗೆ ಶಾಲೆ ಆರಂಭಿಸಲು ನಿರ್ಧಾರ ಮಾಡಲಾಗಿದೆ. ತಾಂತ್ರಿಕ ಸಲಹಾ ಸಮಿತಿ ಕೊಟ್ಟ ವರದಿ, ತಜ್ಞರು ಕೊಟ್ಟ ಸಲಹೆ ಮೇರೆಗೆ ಶಾಲೆ ಆರಂಭಿಸೋ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಮೊದಲ ಹಂತವಾಗಿ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ನಂತರ 9 ಮತ್ತೆ ಪ್ರಥಮ ಪಿಯುಸಿ ತರಗತಿಗಳು ಆರಂಭವಾಗಲಿವೆ. ಜನವರಿ ಜನವರಿ 1ರಿಂದ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭ ಮಾಡಬಹುದು. ತಜ್ಞರು ಹಾಗೂ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಕೊಟ್ಟಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಲ್ಲರ ಒಮ್ಮತದ ಅಭಿಪ್ರಾಯ ದಿಂದ ಶಾಲೆ ಆರಂಭದ ಬಗ್ಗೆ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಜನವರಿ 1ರಿಂದ ಶಾಲೆಗಳು ಆರಂಭವಾದರೂ ಮಕ್ಕಳು ಶಾಲೆಗೆ ಬರಲೇಬೇಕೆಂದು ಕಡ್ಡಾಯವಿಲ್ಲ. ಆದರೆ, ದಾಖಲಾತಿ ಮಾಡಿಸಿಕೊಳ್ಳುವುದು ಕಡ್ಡಾಯ. ಹಾಗೇ, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಇರುವುದಿಲ್ಲ. ಮಕ್ಕಳು ಪೋಷಕರ ಅನುಮತಿ ಪತ್ರ ಕಡ್ಡಾಯ ತರಬೇಕು

ಈ ಬಗ್ಗೆ ಸಭೆಯ ನಂತರ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಜನವರಿ 1ರಿಂದ 8 ಮತ್ತು 9ನೇ ತರಗತಿ ವಿದ್ಯಾಗಮ ಆರಂಭವಾಗಲಿದೆ. ಜನವರಿ 6ರಿಂದ 9ನೇ ತರಗತಿ ವಿದ್ಯಾಗಮ ಆರಂಭವಾಗಲಿದೆ. ಈ ಬಾರಿ ಶಾಲೆ ಆವರಣ ಒಳಗೆ ಮಾತ್ರ ವಿದ್ಯಾಗಮ ನಡೆಯಲಿದೆ. ವಾರಕ್ಕೆ ಮೂರು ದಿನ ಮಾತ್ರ ವಿದ್ಯಾಗಮ ಇರಲಿದೆ. ಶಾಲೆಗೆ ಬರೋ ಮಕ್ಕಳು ಪೋಷಕರಿಂದ ಒಪ್ಪಿಗೆ ಪತ್ರ ತರಬೇಕು ಎಂದು ಹೇಳಿದ್ದಾರೆ.

ಶಾಲೆ ಆರಂಭಿಸುವ ಬಗ್ಗೆ ನಡೆದ ಸಿಎಂ ನೇತೃತ್ವದ ಸಭೆಯಲ್ಲಿ ಶಾಲೆ ಆರಂಭದ ಬಗ್ಗೆ ಸಚಿವರ ಸಲಹೆ ಪಡೆಯಲಾಯಿತು. ಶಾಲೆ ಆರಂಭಕ್ಕೂ ಈಗಾಗಲೇ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ತಜ್ಞರು ಕೂಡ ಈ ಬಗ್ಗೆ ಸಲಹೆ ಕೊಟ್ಟಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಕೂಡ ಒಪ್ಪಿಗೆ ನೀಡಿದೆ. ಹೀಗಾಗಿ, 9ರಿಂದ 12ನೇ ತರಗತಿಯವರೆಗೆ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.

SOURCE: News18 ಕನ್ನಡ

error: