April 26, 2024

Bhavana Tv

Its Your Channel

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ ಕೊರೋನಾದಿಂದ ಸಾವು

 

ಬೆಂಗಳೂರುಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ಪ್ರಸಂಗಕರ್ತೃ, ವಾಗ್ಮಿ ಪ್ರೊ. ಎಂ.ಎ.ಹೆಗಡೆ (73) ಅವರು ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ‌ ನಿಧನರಾದರು.

ಎಂ.ಎ.ಹೆಗಡೆ ಅವರಿಗೆ ಕೋವಿಡ್‌ ಸೋಂಕು ತಗುಲಿರುವುದು ಏಪ್ರಿಲ್ 13ರಂದು ದೃಢ‍ಪಟ್ಟಿತ್ತು. ಶನಿವಾರ ಮುಂಜಾನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.

ಯಕ್ಷಗಾನದ ಅರ್ಥಧಾರಿ ಹಾಗೂ ಪ್ರಸಂಗಕರ್ತರಾಗಿದ್ದ ಅವರು ಎರಡನೇ ಅವಧಿಗೆ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿದ್ದರು. ಕೋವಿಡ್–19 ಲಾಕ್‌ಡೌನ್‌ ಅವಧಿಯಲ್ಲಿ ಹಿರಿಯ ಹಾಗೂ ಪ್ರಸಿದ್ಧ ಯಕ್ಷಗಾನ ಹಿರಿಯ ಕಲಾವಿದರ ಜೊತೆ ವರ್ಚುವಲ್‌ ರೂಪದಲ್ಲಿ ‘ಮಾತಿನ ಮಂಟಪ’ ಮಾತುಕತೆ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಡಿ 100ಕ್ಕೂ ಅಧಿಕ ಕಲಾವಿದರ ಬದುಕಿನ ಚಿತ್ರಣವನ್ನು ಕಟ್ಟಿಕೊಟ್ಟಿದ್ದರು. ‘ಮಾತಿನ ಮಂಟಪ’ ಕಾರ್ಯಕ್ರಮದ ಮೂಲಕ 70 ವರ್ಷ ಮೀರಿದ ಕಲಾವಿದ ಸಂದರ್ಶನವನ್ನು ವರ್ಚುವಲ್‌ ರೂಪದಲ್ಲಿ ಕಟ್ಟಿಕೊಟ್ಟಿದ್ದರು. ಈ ಸರಣಿಯಲ್ಲಿ 50ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಅಕಾಡೆಮಿಯು ರೂಪಿಸಿತ್ತು. ಕಲಾವಿದರ ಸಾಧನೆ, ಚಿಂತನೆ ಹಾಗೂ ಅವರ ಕಲಾ ಬದುಕನ್ನು ಯಕ್ಷಗಾನದ ಅಭಿಮಾನಿಗಳಿಗೆ ತಿಳಿಸುವ ಈ ಕಾರ್ಯಕ್ರಮ ಸರಣಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಅಕಾಡೆಮಿ‌ ಅಧ್ಯಕ್ಷರಾಗಿ ಕಲೆ, ಕಲಾವಿದರ ಉನ್ನತಿಗಾಗಿ ಎಂ.ಎ.ಹೆಗಡೆ ಅವರು ಸಾಕಷ್ಟು ಶ್ರಮಿಸಿದ್ದರು. ಕಲಾವಿದರ ವಲಯದಲ್ಲಿಯೂ ಹೆಗಡೆ ಅವರ ಬಗ್ಗೆ ಅಪಾರ ಗೌರವವಿತ್ತು.

source: ಪ್ರಜಾವಾಣಿ

error: