March 29, 2024

Bhavana Tv

Its Your Channel

ನಾಳೆ ಸಂಜೆಯಿಂದ 14 ದಿನಗಳ ಕಾಲ ‘ಕರ್ನಾಟಕ ಸಂಪೂರ್ಣ ಲಾಕ್‌ಡೌನ್‌’

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ೧೯ ಸೋಂಕಿತರ ಸಂಖ್ಯೆಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ, ಸೋಂಕು ಹರಡುವುದನ್ನು ತಪ್ಪಿಸಲು ಸರ್ಕಾರ ಇಂದು ಕಠಿಣ ನಿರ್ಧಾರ ಕೈಗೊಂಡಿದೆ.

ರಾಜ್ಯದಲ್ಲಿ ೧೪ ದಿನಗಳ ಕಾಲ ಸಂಪೂರ್ಣ ಬಂದ್ ಮಾಡಲು ಸರ್ಕಾರ ನಿರ್ಧರಿಸಿದೆ. ವೀಕೆಂಡ್ ಕರ್ಫ್ಯೂ ಸಮಯದಲ್ಲಿದ್ದ ನಿಯಾಮವಳಿಗಳು ವಾರ ಪೂರ್ತಿ ಅನ್ವಯವಾಗುವಂತೆ ಮಾಡಲು ಸರ್ಕಾರ ಆದೇಶಿಸಿದೆ.

ಮಂಗಳವಾರ ರಾತ್ರಿಯಿಂದ (ಏ.೨೭) ದಿಂದ ಮುಂದಿನ ೧೪ ದಿನಗಳ ಕಾಲ ರಾಜ್ಯದಲ್ಲಿ ಸಂಪೂರ್ಣ ಬಂದ್ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಮಾಹಿತಿಯನ್ನು ಸ್ಪಷ್ಟಪಡಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲಿ ೧೮ ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೊರೋನಾ ಲಸಿಕೆ ನೀಡಲಾಗುತ್ತದೆ. ಈ ಬಗ್ಗೆ ರೂಪುರೇಷೆಗಳನ್ನು ಆರೋಗ್ಯ ಇಲಾಖೆ ಪ್ರಕಟಿಸಲಿದೆ. ಈ ಕೋವಿಡ್ ತಡೆಯೋದಕ್ಕೆ ಬಿಗಿ ಕ್ರಮವಾಗಿ ನಾಳೆ ರಾತ್ರಿಯಿಂದ ೧೪ ದಿನ ಬಿಗಿ ಕ್ರಮ ಜಾರಿಯಲ್ಲಿರುತ್ತದೆ. ಇದು ರಾಜ್ಯಾಧ್ಯಂತ ಜಾರಿಯಲ್ಲಿ ಇರಲಿದೆ.

ಬೆಳಿಗ್ಗೆ ೬ ರಿಂದ ೧೦ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ ೧೦ ಗಂಟೆಯ ನಂತ್ರ ಎಲ್ಲವೂ ಸಂಪೂರ್ಣವಾಗಿ ಬಂದ್ ಮಾಡಲಾಗುತ್ತದೆ. ಗಾರ್ಮೆಂಟ್ಸ್ ನೌಕರರನ್ನು ಬಿಟ್ಟು, ಕಟ್ಟಡ ಕಾಮಗಾರಿ, ಕೃಷಿ ಚಟುವಟಿಕೆಗೆ ಯಾವುದೇ ತೊಂದರೆಯಿಲ್ಲ. ವೈದ್ಯಕೀಯ, ಅಗತ್ಯ ಸೇವೆ ಎಂದಿನAತೆ ಇರಲಿದೆ. ರಾತ್ರಿ ೯ ಗಂಟೆಯಿAದ ಬೆಳಿಗ್ಗೆ ೬ರವೆರೆಗ ಕರ್ಪ್ಯೂ ಮುಂದುವರೆಯಲಿದೆ. ಎಲ್ಲಾ ಜಿಲ್ಲಾಧಿಕಾರಿಗಳು ಈ ಬಗ್ಗೆ ಸೂಕ್ತ ಬಂದೋಬಸ್ತ್ ಮಾಡಲಿದ್ದಾರೆ. ತಾಲೂಕು ಆಡಳಿತ ಕೂಡ ನಿಯಂತ್ರಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. ಕೆಎಸ್ಸಾರ್ಟಿಸಿ, ಬಿಎಂಟಿಸಿ, ನಮ್ಮ ಮೆಟ್ರೋ ಸೇರಿದಂತೆ ಸಾರಿಗೆ ಸಂಚಾರ 14 ದಿನಗಳ ಕಾಲ ಬಂದ್ ಆಗಲಿದೆ. ಅಂತಾರಾಜ್ಯ ಬಸ್ ಸಂಚಾರವೂ ಸ್ಥಗಿತ. ಖಾಸಗಿ ವಾಹನಗಳಲ್ಲಿ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ. ಇನ್ನುಂದೆ ‘ಆಕ್ಸಿಜನ್’ ಕೊರತೆ ಇಲ್ಲ. ಹೊಟೇಲ್ ಬಾರಗಳಲ್ಲಿ ಪಾರ್ಸಲ್‌ಗೆ ಅವಕಾಶವಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ವಿಧಾನಸಭೆಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಯಿತು.

error: