April 27, 2024

Bhavana Tv

Its Your Channel

ಸಾರ್ವಜನಿಕರು ತಪ್ಪದೇ ಕೋವಿಡ್ ನಿಯಮಗಳನ್ನು ಪಾಲಿಸಿ, ಸುರಕ್ಷಿತರಾಗಿರಿ- ಶಶಿಕಲಾ ಜೊಲ್ಲೆ

ಬೆಳಗಾವಿ: ನಿಪ್ಪಾಣಿಯಲ್ಲಿ, ಕೊರೋನಾ ಸ್ಥಿತಿಗತಿಯ ಸಮಾಲೋಚನೆ ಹಾಗೂ ನಿಯಂತ್ರಣದ ಬಗ್ಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ , ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಸಭೆ ನಡೆಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.

ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ನಿಪ್ಪಾಣಿ ಸಾರ್ವಜನಿಕ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲು ಚರ್ಚಿಸಲಾಗಿದೆ. ತಾಯಿ ಮತ್ತು ಮಕ್ಕಳ ಆರೈಕೆ ಕೇಂದ್ರವನ್ನು ಕೋವಿಡ್ ಮುಕ್ತ ಕೇಂದ್ರವನ್ನಾಗಿ ಮಾಡಲು ಸಮಾಲೋಚಿಸಿದರು. ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ಕಡಿಮೆಯಾದಲ್ಲಿ, ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯಲ್ಲೂ ಪ್ರಾರಂಭಿಸಲಾಗುವುದು. ತಾಲ್ಲೂಕು ಆಸ್ಪತ್ರೆಗೆ ಯಾವುದೇ ರೀತಿಯ ಸಹಕಾರ ಬೇಕಾದಲ್ಲಿ ನಾವು ಒದಗಿಸಲು ಸಿದ್ಧರಿದ್ದೇವೆ. ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸಿ, ನಿಯಮ ಉಲ್ಲಂಘನೆಯಾಗದAತೆ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಎಸ್. ವ್ಹಿ. ಮುನ್ಯಾಳ, ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ. ವಿಠ್ಠಲ ಶಿಂಧೆ, ತಹಶೀಲ್ದಾರರಾದ ಶ್ರೀ ಪ್ರಕಾಶ ಗಾಯಕವಾಡ, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಇತರೆ ಗಣ್ಯರು ಹಾಜರಿದ್ದರು.

ವರದಿ :ಮಹೇಶ ಶರ್ಮಾ ಬೆಳಗಾವಿ

error: