
ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕೆ ರಾಜ್ಯಾದ್ಯಂತ ಕೊರೊನಾ ಸೋಂಕಿತ ಪ್ರದೇಶಗಳಲ್ಲಿ ರಾಸಾಯನಿಕ ದ್ರಾವಣವನ್ನು ಸಿಂಪಡಿಸುವ ಕಾರ್ಯಕ್ಕೆ ಬೆಂಗಳೂರಿನ ಟೌನ್ ಹಾಲ್ ಬಳಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಸಾಯನಿಕ ದ್ರಾವಣವನ್ನು ಸಿಂಪಡಿಸುವ ವಾಹನಗಳಿಗೆ ಹಸಿರು ನಿಶಾನೆ ತೋರಿಸಿವ ಮೂಲಕ ಚಾಲನೆ ನೀಡಲಾಯಿತು.

ಕಳೆದ ಬಾರಿ ಕೋವಿಡ್ ಸೋಂಕು ಹರಡಿದ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಸೋಂಕು ಹೆಚ್ಚು ಜನರಿಗೆ ತಗುಲಿದ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣ ರಾಸಾಯನಿಕ ದ್ರಾವಣವನ್ನು ಸಿಂಪಡಿಸಲಾಗಿತ್ತು. ಈಗ ಎರಡನೆಯ ಅಲೆ ನಿಯಂತ್ರಿಸುವ ಸಂಬಂಧ ಇಲಾಖೆ ಇಂದಿನಿಂದ ರಾಜ್ಯಾದ್ಯಂತ ರಾಸಾಯನಿಕ ದ್ರಾವಣ ಸಿಂಪಡಿಸುವ ಕೆಲಸ ಆರಂಭಿಸಿದೆ. ಈ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ಮಾದರಿಯ 12 ಬೃಹತ್ ವಾಹನಗಳು ರಾಸಾಯನಿಕ ಸಿಂಪರಣೆ ಕಾರ್ಯಾಚರಣೆ ಆರಂಭಿಸಲಿವೆ. ಸಣ್ಣ ರಸ್ತೆ ಗಳಿರುವ ಪ್ರದೇಶಗಳಲ್ಲಿ ಸಣ್ಣ ವಾಹನಗಳನ್ನು ದ್ರಾವಣ ಸಿಂಪಡಿಸಲು ಬಳಕೆ ಮಾಡಲಾಗುವುದು ,

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಪೊಲೀಸ್ ಮಹಾನಿರ್ದೇಶಕರಾದ ಅಮರ ಕುಮಾರ ಪಾಂಡೆ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ