May 11, 2021

Bhavana Tv

Its Your Channel

ಪತ್ರಕರ್ತರು ಇನ್ನು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮನವಿಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪತ್ರಕರ್ತರನ್ನು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಣೆ ಮಾಡಿದ್ದಾರೆ.

ಕೆಯುಡಬ್ಲ್ಯೂಜೆ ಅಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದಲ್ಲಿ ಇಂದು ಮುಖ್ಯಮಂತ್ರಿ ಭೇಟಿ ಮಾಡಿದ ನಿಯೋಗಕ್ಕೆ ಭರವಸೆ ನೀಡಿದ್ದಲ್ಲದೆ, ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ನಿಯೋಗದಲ್ಲಿ ಪಬ್ಲಿಕ್ ಟಿವಿ ರವೀಶ್, ಪತ್ರಕರ್ತರಾದ ಯುಎನ್ ಐ ರಾಚಪ್ಪ, ಪ್ರಜಾ ಟಿವಿಯ ಅರುಣ್ ಕುಮಾರ್ ಮತ್ತಿತರರು ಹಾಜರಿದ್ದರು.

ಅಭಿನಂದನೆ:
ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿ ಈ ಕ್ರಮ ಕೈಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಉತ್ತರ ಕನ್ನಡ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ್ ಹಾಗೂ ಪ್ರಧಾನ ಕಾರ್ಯದರ್ಶಿ ನರಸಿಂಹ ಅಡಿ ಅಭಿನಂದಿಸಿದ್ದಾರೆ.

error: