April 25, 2024

Bhavana Tv

Its Your Channel

ರಾಜ್ಯ ಸರ್ಕಾರದಿಂದ ‘ಖಾಸಗಿ ಆಸ್ಪತ್ರೆ’ಗಳಲ್ಲಿ ‘ಸಿಟಿ ಸ್ಕ್ಯಾನಿಂಗ್’ಗೆ ರೂ.1,500 ದರ ನಿಗದಿ

ಬೆಂಗಳೂರು, ಮೇ 07: ಸಿಟಿ ಸ್ಕ್ಯಾನಿಂಗ್‌ ದುಬಾರಿ ಹಣ ವಸೂಲಿಗೆ ಕಡಿವಾಣ ಹಾಕಿ ಸರ್ಕಾರ ದರ ನಿಗದಿ ಮಾಡಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸಿಟಿ ಸ್ಕ್ಯಾನ್ ಮಾಡಲಾಗುವುದು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1500 ರೂ ದರ ನಿಗಡಿ ಮಾಡಿ ಸರ್ಕಾರ ಆದೇಶಿಸಿದೆ.

ಈ ಕುರಿತು ಸಚಿವ ಸುಧಾಕರ್ ಮಾತನಾಡಿ, ಕೆಲ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ.

ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್ ಗಾಗಿ ಒಂದೂವರೆ ಸಾವಿರ ರೂಪಾಯಿ ನಿಗದಿ ಪಡಿಸಲಾಗಿದೆ. ಒಂದು ವೇಳೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಹಣ ಪಡೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಸಚಿವರು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರಿ ವ್ಯವಸ್ಥೆಯಲ್ಲಿ ಸ್ಕ್ಯಾನಿಂಗ್ ಅನ್ನು ಉಚಿತವಾಗಿ ಮಾಡಲಾಗುತ್ತಿದೆ. ಸಾರ್ವಜನಿಕರು ಸರಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದೂ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.

source:Oneindia

error: