December 1, 2023

Bhavana Tv

Its Your Channel

ನಿಲ್ಲಿಸಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ : ಒಬ್ಬ ಸಾವು : ಇನೊಬ್ಬ ಗಾಯ..!

ಕಾಪು : ಉಡುಪಿ ಜಿಲ್ಲೆಯ ಉಚ್ಚಿಲ ಇಲ್ಲಿಯ ಮಸೀದಿಯ ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಚಲಿಸುತ್ತಿದ್ದ ಲಾರಿಯೊಂದು ಢಿಕ್ಕಿಯಾದ ಪರಿಣಾಮ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ನಸುಕಿನ ಜಾವ ನಡೆದಿದೆ ಎಂದು ತಿಳಿದು ಬಂದಿದೆ.
ಡಿಕ್ಕಿಯಾದ ರಭಸಕ್ಕೆ ಎರಡೂ ಲಾರಿಗಳು ಚತುಃಷ್ಪಥ ಹೆದ್ದಾರಿಯ ಎರಡೂ ಭಾಗದಲ್ಲಿ ಉರುಳಿ ಬಿದ್ದಿವೆ.ಲಾರಿಯಲ್ಲಿದ್ದ ಇನೊಬ್ಬ ಗಂಭೀರ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಪಡುಬಿದ್ರಿ ಠಾಣಾ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

error: