May 14, 2024

Bhavana Tv

Its Your Channel

ಕರಾವಳಿಯಲ್ಲಿ ಇರಲಿದೆ ಬಿರುಗಾಳಿ : ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಉಡುಪಿ: ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯ ವಾತಾವರಣ ಇರಲಿದೆ. ಪರಿಣಾಮ ಕಡಲು ಪ್ರಕ್ಷುಬ್ಧಗೊಳ್ಳುವುದರಿಂದ ಮೀನುಗಾರರು ಮೀನುಗಾರಿಕೆಗೆ ಕಡಲಿಗೆ ಇಳಿಯದಂತೆ ಭಾರತ ಹವಾಮಾನ ಇಲಾಖೆಯ ಬೆಂಗಳೂರು ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತೀರದಲ್ಲಿ ಒಂದು ತಾಸಿಗೆ ೪೫-೫೫ ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಗಾಳಿಯಿಂದ ಕೂಡಿದ ಬಿರುಗಾಳಿಯ ವಾತಾವರಣ ಇರಲಿದೆ. ನಾಳೆ (ಸೆ. ೧೦) ರಾತ್ರಿ ೧೧.೩೦ರ ವರೆಗೆ ರ‍್ನಾಟಕ ಕರಾವಳಿಯ ಮಂಗಳೂರಿನಿಂದ ಕಾರವಾರದ ವರೆಗಿನ ವ್ಯಾಪ್ತಿಯಲ್ಲಿ ಸಮುದ್ರದಲ್ಲಿ ೨.೩ – ೨.೬ ಮೀಟರ್ ಎತ್ತರದ ಅಲೆಗಳು ಏಳಲಿವೆ. ಅಲೆಗಳ ಮೇಲ್ಮೈ ವೇಗವು ವೇಗವು ಸೆಕೆಂಡಿಗೆ ೩೬ – ೫೬ ಸೆಂ.ಮೀ. ನಡುವೆ ಬದಲಾಗುತ್ತದೆ ಎಂದು ಮುನ್ಸೂಚನೆ ನೀಡಲಾಗಿದೆ.
ಆದ್ದರಿಂದ ಮುನ್ನೆಚ್ಚರಿಕೆ ಸಲುವಾಗಿ ಕರಾವಳಿಯ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ಕೊಡಲಾಗಿದೆ

error: