April 10, 2025

Bhavana Tv

Its Your Channel

ಡಿ.೦೮,ಭಾರತ್ ಬಂದ್‌ಗೆ ಉಡುಪಿ ಜಿಲ್ಲಾ ಸಿಐಟಿಯು ಬೆಂಬಲ

ಉಡುಪಿ: ಡಿ.೦೬;ಕೇಂದ್ರ ಸರಕಾರವು ರೈತ ವಿರೋಧಿ ಕಾಯಿದೆಗಳನ್ನು ವಾಪಾಸ್ಸು ಪಡೆಯಲು ವಿಶೇಷ ಅಧಿವೇಶನ ಕರೆಯಲು ಆಗ್ರಹಿಸಿ ಕಳೆದ ೧೧ದಿನಗಳಿಂದ ದೆಹಲಿಯಲ್ಲಿ ರೈತರು ಧರಣಿ ನಡೆಸುತ್ತಿದ್ದಾರೆ. ರೈತರ ಮುಂದಿನ ಹೋರಾಟದ ಭಾಗವಾಗಿ ೩೦೦ ರೈತ ಸಂಘಟನೆಗಳು ರೈತರ ಬೇಡಿಕೆಗಳಿಗಾಗಿ ಡಿ.೦೮ ರಂದು ಜನತಾ ಕರ್ಫ್ಯೂ/ ಅಖಿಲಭಾರತ ಬಂದ್ ಗೆ ಕರೆ ನೀಡಿರುವುದನ್ನು ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ. ಈ ಕಾಯಿದೆಗಳು ಜಾರಿಯಾದಲ್ಲಿ ಈಗಾಗಲೇ ಸಂಕಷ್ಟಕ್ಕೆ ಒಳಗಾಗಿರುವ ರೈತರು ಕಾರ್ಪೊರೇಟ್ ಕಂಪೆನಿಗಳ ಹಿಡಿತಕ್ಕೆ ಒಳಗಾಗುತ್ತಾರೆ. ಅದಾನಿ, ಅಂಬಾನಿಗಳ ಸೂಪರ್ ಲಾಭ ಹೆಚ್ಚುತ್ತದೆ. ದವಸ ಧಾನ್ಯಗಳ ಉತ್ಪಾದನೆ ತೀವ್ರವಾಗಿ ಕುಂಠಿತಗೊಳ್ಳುತ್ತದೆ ಎಂದಿದ್ದಾರೆ,
ಡಿ.೦೮ ರಂದು ಜಿಲ್ಲೆಯ ಮೂರು ತಾಲೂಕುಗಳಲ್ಲಿ ಸಮಾನ ಮನಸ್ಕ ಸಂಘಟನೆಗಳೊAದಿಗೆ ಪ್ರತಿಭಟನೆ ನಡೆಸಲಿದೆ ಎಂದು ಅಧ್ಯಕ್ಷರು ಕೆ.ಶಂಕರ್, ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

error: