April 22, 2021

Bhavana Tv

Its Your Channel

ಭಾರತೀಯ ವಿಕಾಸ ಟ್ರಸ್ಟಿನಲ್ಲಿ ಮಾರ್ಚ ೮ರಂದು ಮಹಿಳಾ ದಿನಾಚರಣೆ ಕಾರ್ಯಕ್ರಮ

ಮಣಿಪಾಲ ಮಾ ೪: ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ “ಮಹಿಳೆ ಮತ್ತು ನಾಯಕತ್ವ” ಎಂಬ ವಿಷಯದಲ್ಲಿ ವಿಚಾರಗೋಷ್ಠಿ ದಿನಾಂಕ ೮ ಮಾರ್ಚ್ ೨೦೨೧ ಪೂರ್ವಾಹ್ನ ೧೦.೦೦ ಗಂಟೆಗೆ ಭಾರತೀಯ ವಿಕಾಸ ಟ್ರಸ್ಟ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಮಹಿಳಾ ದಿನಾಚರಣೆ ಮತ್ತು ವಿಚಾರಗೋಷ್ಠಿಯ ಉದ್ಘಾಟನೆಯನ್ನು ಖ್ಯಾತ ಲೇಖಕಿ ಭುವನೇಶ್ವರಿ ಹೆಗಡೆ ನಡೆಸಿಕೊಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಶೆಟ್ಟಿ ಅವರು ವಹಿಸಲಿದ್ದು ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದ ಪ್ರಾಂಶುಪಾಲೆ ಡಾ. ನಿರ್ಮಲಾ ಕುಮಾರಿ, ನಾಬಾರ್ಡ ಸಂಸ್ಥೆಯ ಡಿ.ಡಿ.ಎಂ ಸಂಗೀತಾ ಕರ್ತಾ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ.

ತದನಂತರ ನಡೆಯುವ ವಿಚಾರಗೋಷ್ಠಿಯಲ್ಲಿ ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದ ಪ್ರಾಂಶುಪಾಲೆ ಡಾ. ನಿರ್ಮಲಾ ಕುಮಾರಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಡಿಪಿಒ ವೀಣಾ ವಿವೇಕಾನಂದ, ಉಡುಪಿ ತಾಲೂಕು ಅರೋಗ್ಯಾಧಿಕಾರಿ ಡಾ. ನಾಗರತ್ನ ವಿಚಾರಮಂಡನೆಗೈಯಲಿದ್ದಾರೆ. ಭಾರತೀಯ ವಿಕಾಸ ಟ್ರಸ್ಟಿನ ಮುಖ್ಯ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀ ಬಾಯಿ ಮತ್ತು ಅಧಿಕಾರಿ ಭಾರತಿ ಹೆಗಡೆ, ಪ್ರತಿಮಾ ಕಾರ್ಯಕ್ರಮ ಸಂಯೋಜನೆ ನಡೆಸಲಿದ್ದಾರೆ ಎಂದು ಭಾರತೀಯ ವಿಕಾಸ ಟ್ರಸ್ಟ್ ಹಿರಿಯ ಸಲಹೆಗಾರ ಶ್ರೀಕಾಂತ ಹೊಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: